ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಐಟಿಕೆ: ಇಸ್ರೋ ಪ್ರಾದೇಶಿಕ ಕೇಂದ್ರ

Last Updated 3 ಜನವರಿ 2020, 21:59 IST
ಅಕ್ಷರ ಗಾತ್ರ

ಮಂಗಳೂರು: ‘ಎನ್‌ಐಟಿಕೆಯಲ್ಲಿ ಆರಂಭಿಸಿರುವ ಪ್ರಾದೇಶಿಕ ಅಧ್ಯಯನ ಕೇಂದ್ರದಿಂದ ದಕ್ಷಿಣ ಭಾರತದ ಬಾಹ್ಯಾಕಾಶ ವಿಜ್ಞಾನದ ವಿದ್ಯಾರ್ಥಿಗಳ ಸಬಲೀಕರಣಕ್ಕೆ ಅನುಕೂಲ ಆಗಲಿದೆ’ ಎಂದು ಇಸ್ರೊ ಸಾಮರ್ಥ್ಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ.ಪಿ.ವೆಂಕಿಟಕೃಷ್ಣನ್‌ ತಿಳಿಸಿದರು.

ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ಶುಕ್ರವಾರ ಒಪ್ಪಂದಕ್ಕೆ ಸಹಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಒಪ್ಪಂದದಿಂದಾಗಿ ಭವಿಷ್ಯದಲ್ಲಿ ಇಸ್ರೊಗೆ ಅಗತ್ಯವಾಗಲಿರುವ ಬಾಹ್ಯಾಕಾಶಕ್ಕೆ ಸಂಬಂಧಿಸಿದ ತಂತ್ರಜ್ಞಾನಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಎನ್‌ಐಟಿಕೆ ಮಹತ್ತರ ಪಾತ್ರ ವಹಿಸಲಿದೆ’ ಎಂದರು.

ಈ ಅಧ್ಯಯನ ಕೇಂದ್ರವು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕೇರಳ, ಲಕ್ಷದ್ವೀಪ ಸೇರಿದಂತೆ ದಕ್ಷಿಣ ಭಾರತದಲ್ಲಿ ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ. ಬಾಹ್ಯಾಕಾಶಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಈ ಕೇಂದ್ರಕ್ಕೆ ವಾರ್ಷಿಕ ₹2 ಕೋಟಿ ಅನುದಾನ ದೊರೆಯಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT