ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಜಾಹೀರಾತು: ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನಕ್ಕೆ ತಾಕೀತು

Last Updated 17 ಜನವರಿ 2020, 2:54 IST
ಅಕ್ಷರ ಗಾತ್ರ

ಬೆಂಗಳೂರು: ‘ಅಕ್ರಮ ಜಾಹೀರಾತುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ದಿಸೆಯಲ್ಲಿ ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಸೇರಿದಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳೂ ಮುಂದಾಗುವಂತೆ ಆದೇಶ ಹೊರಡಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ, ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ–1993ರ ಕಲಂ 316 (3)ರ ಅಡಿಯಲ್ಲಿನ ಅಧಿಕಾರ ಬಳಸಿ ಈ ಸಂಬಂಧ ಎಲ್ಲ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ. ವಿಚಾರಣೆಯನ್ನು ಫೆಬ್ರುವರಿ 26ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT