ಆನಂದ್ ಸಿಂಗ್ ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು: ಆನಂದ್ ಸಿಂಗ್ ಅವರನ್ನು ಸಂಪರ್ಕಿಸಲು ನಾವು ಪ್ರಯತ್ನ ಪಟ್ಟೆವು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಆನಂದ್ ಸಿಂಗ್ ಅವರು ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಇಂದು ಮಾಧ್ಯಮಗಳಲ್ಲಿ ಮುನ್ನೆಲೆಗೆ ಬರುತ್ತಲೇ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ‘ವಿಚಾರ ತಿಳಿದು ಸ್ವಲ್ಪ ಆಶ್ಚರ್ಯವಾಗಿದ್ದು ನಿಜ. ನಾನು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ, ಸಾಧ್ಯವಾಗಲಿಲ್ಲ. ಅವರು ರಾಜೀನಾಮೆ ನೀಡಿರುವುದು ನಿಜವೋ ಸುಳ್ಳೋ ಎಂಬುದನ್ನು ಒಂದು ಬಾರಿ ಸ್ಪೀಕರ್ ಬಳಿ ಮಾತನಾಡಿ ತಿಳಿದುಕೊಳ್ಳುತ್ತೇನೆ,’ ಎಂದು ತಿಳಿಸಿದರು.
ಬಳ್ಳಾರಿಯ ವಿಜಯನಗರ ಕ್ಷೇತ್ರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು, ಸ್ಪೀಕರ್ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ನಡುವೆ ಅವರು, ರಾಜ್ಯಪಾಲರನ್ನು ಭೇಟಿಯಾಗಿ ಸಮಾಲೋಚನೆಯನ್ನೂ ನಡೆಸಿದ್ದಾರೆ.
Karnataka Minister & Congress leader DK Shivakumar on Congress MLA from Vijayanagar, Anand Singh's resignation from state assembly membership*: Definitely, it is a bit shocking, I'm trying to trace him, I couldn't trace him. I've to check with the speaker whether it's true or not https://t.co/1rOEdSkLFx
— ANI (@ANI) July 1, 2019
ಇದನ್ನೂ ಓದಿ:
* ಸಂಚಲನ ಸೃಷ್ಟಿಸಿದ ಶಾಸಕ ಆನಂದ್ ಸಿಂಗ್ ರಾಜೀನಾಮೆ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.