ಮಂಗಳವಾರ, ಅಕ್ಟೋಬರ್ 15, 2019
26 °C

ಐ.ಟಿ ದಾಳಿ: ಪ್ರತಿಕ್ರಿಯೆ ನೀಡುವುದೇ ವ್ಯರ್ಥ ಎಂದ ಕೇಂದ್ರ ಸಚಿವ

Published:
Updated:

ಮೈಸೂರು: ಆದಾಯ ತೆರಿಗೆ ಇಲಾಖೆ ದಾಳಿ ಸಂಬಂಧ, ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡುವುದೇ ವ್ಯರ್ಥ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್‌ ಹೇಳಿದರು.

‘ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ತಮ್ಮ ಕೆಲಸ ಮಾಡುತ್ತಿವೆ. ಇದಕ್ಕೂ ನಮಗೂ ಸಂಬಂಧವಿಲ್ಲ. ಸರ್ಕಾರವೇನೂ ಹಸ್ತಕ್ಷೇಪ ಮಾಡುತ್ತಿಲ್ಲ. ವಿರೋಧ ಪಕ್ಷಗಳು ಆಧಾರವಿಲ್ಲದೇ ಆರೋಪ ಮಾಡುತ್ತಿವೆ’ ಎಂದು ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

Post Comments (+)