ಆರೋಪಿಗಳು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ: ಹೆಚ್ಚುವರಿ ಸಾಲಿಸಿಟರ್ ಜನರಲ್

ಮಂಗಳವಾರ, ಜೂನ್ 25, 2019
27 °C
ಪ್ರತಿಪಾದನೆ

ಆರೋಪಿಗಳು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ: ಹೆಚ್ಚುವರಿ ಸಾಲಿಸಿಟರ್ ಜನರಲ್

Published:
Updated:

ಬೆಂಗಳೂರು: ‘ಬೆಂಗಳೂರು ಮತ್ತು ನವದೆಹಲಿಯ ವಿವಿಧೆಡೆ 2017ರಲ್ಲಿ ನಡೆಸಿದ ಆದಾಯ ತೆರಿಗೆ (ಐ.ಟಿ) ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಇತರ ನಾಲ್ವರು ಆರೋಪಿಗಳು ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ’ ಎಂದು ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ ಜನಪ್ರತಿನಿಧಿಗಳ ಕೋರ್ಟ್ ಗೆ ತಿಳಿಸಿದರು.

‘ಪ್ರಕರಣದಿಂದ ನಮ್ಮನ್ನು ಕೈಬಿಡಬೇಕು’ ಎಂದು ಕೋರಿ ಪ್ರಕರಣದ ಆರೋಪಿಗಳಾದ ಡಿ.ಕೆ.ಶಿವಕುಮಾರ್, ಎನ್‌.ರಾಜೇಂದ್ರ ಮತ್ತು ಆಂಜನೇಯ ಹನುಮಂತಯ್ಯ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಮಂಗಳವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ನಾವದಗಿ ಅವರು, ‘ಆರೋಪಿಗಳು, ಆದಾಯ ತೆರಿಗೆ ಕಾಯ್ದೆ–1961ರ ವಿವಿಧ ಕಲಂಗಳಡಿ ದಂಡನೀಯ ಅಪರಾಧ ಎಸಗಿದ್ದಾರೆ. ಆದ್ದರಿಂದ ಅವರ ಅರ್ಜಿ ಪರಿಗಣಿಸಬಾರದು’ ಎಂದು ಮನವಿ ಮಾಡಿದರು.

ವಿಚಾರಣೆಯನ್ನು ಇದೇ 7ಕ್ಕೆ ಮುಂದೂಡಲಾಗಿದೆ. ವಿಚಾರಣೆ ವೇಳೆ ಡಿ.ಕೆ.ಶಿವಕುಮಾರ್ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 12

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !