ಗುರುವಾರ , ಫೆಬ್ರವರಿ 27, 2020
19 °C

ತುಮಕೂರು: ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ರವಿಕುಮಾರ್ ಮನೆ ಮೇಲೆ ಐಟಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ತುಮಕೂರಿನ ಮಾಜಿ ಸಂಸದ ಮುದ್ದಹನುಮೇಗೌಡರ ಆಪ್ತರಾಗಿರುವ ಕಾಂಗ್ರೆಸ್ ಮುಖಂಡ ಹಾಗೂ ಕ್ಲಾಸ್ ಒನ್ ಗುತ್ತಿಗೆದಾರ ರಾಯಸಂದ್ರ ರವಿಕುಮಾರ್ ಮನೆ ಮೇಲೆ ಐಟಿ ದಾಳಿ ಆಗಿದೆ. 
 
ನಗರದ ಎಸ್.ಐ.ಟಿ. ಪ್ರದೇಶದಲ್ಲಿ ಇರುವ ರವಿ ಅವರ ಮನೆಯಲ್ಲಿ ಸೋಮವಾರ ಸಂಜೆಯಿಂದ ತಡರಾತ್ರಿಯವರೆಗೂ ಶೋಧಕಾರ್ಯ ನಡೆಸಿ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದು ಐಟಿ ಅಧಿಕಾರಿಗಳು ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತುರುವೇಕೆರೆಯ ರಾಯಸಂದ್ರದಲ್ಲಿನ ರವಿಕುಮಾರ್ ಅವರ ಮನೆ, ಅವರ ಸಹೋದರಿಯ ಮನೆ ಮೇಲೂ ಏಕಕಾಲದಲ್ಲಿ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬ್ಯಾಂಕ್ ಮತ್ತು ಹಣಕಾಸಿನ ವ್ಯವಹಾರದ ದಾಖಲೆಗಳನ್ನು ವಶಕ್ಕೆ ಪಡೆದಿದೆ. 

ತುಮಕೂರಿನಲ್ಲಿನ ಆದಾಯ ತೆರಿಗೆ ಇಲಾಖೆ ಕಚೇರಿಗೆ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲು ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರವಿಕುಮಾರ್ ಕಳೆದ ಬಾರಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಜೆಡಿಎಸ್ ಅಭ್ಯರ್ಥಿ(ಶಾಸಕ ಗೌರಿಶಂಕರ್) ಎದುರು ಪರಾಭವಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು