ಸರ್ಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿ ಬೇಡ: ಜಗದೀಶ್ ಶೆಟ್ಟರ್

7

ಸರ್ಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿ ಬೇಡ: ಜಗದೀಶ್ ಶೆಟ್ಟರ್

Published:
Updated:

ಹುಬ್ಬಳ್ಳಿ: ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವುದು ಬೇಡ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಭಾನುವಾರ ಹೇಳಿದರು.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಆಚರಿಸುವಾಗ ಅದನ್ನು ಈಗಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರೋಧಿಸಿದ್ದರು. ಆದರೆ ಈಗ ಆಚರಣೆಗೆ ಮುಂದಾಗಿದ್ದಾರೆ. ಇದಕ್ಕೆ ಕೊಡಗಿನ ಜನರು, ಚಿತ್ರದುರ್ಗ ನಾಯಕ ಸಮುದಾಯದ ಪ್ರಭಲ ವಿರೋಧವಿದೆ‌. ಟಿಪ್ಪು ಜಯಂತಿ ಆದೇಶ ಹಿಂಪಡೆಯಬೇಕಾದ ಮುಖ್ಯಮಂತ್ರಿ ಅದನ್ನು ಬೆಂಬಲಿಸುತ್ತಿದ್ದಾರೆ ಎಂದು ಶೆಟ್ಟರ್ ಹೇಳಿದರು.

ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ಪ್ರಬಲವಾಗಿ ವಿರೋಧಿಸಲಿದೆ. ದೇಶದ್ರೋಹಿ, ಅತ್ಯಾಚಾರಿ ಟಿಪ್ಪುವಿನ ಜಯಂತಿಯನ್ನು ಸರ್ಕಾರವೇ ಮುಂದೆ ನಿಂತು ಯಾಕೆ ಆಚರಿಸಬೇಕು? ಟಿಪ್ಪು ಜಯಂತಿ ಆಚರಿಸಲು ಬಿಜೆಪಿ ಬಿಡುವುದಿಲ್ಲ ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 1

  Sad
 • 0

  Frustrated
 • 2

  Angry

Comments:

0 comments

Write the first review for this !