ಶನಿವಾರ, ಡಿಸೆಂಬರ್ 7, 2019
25 °C

ಸಿದ್ದರಾಮಯ್ಯ ಕಾರಣ ಎಂದು ಹಿಂದೆಯೇ ಹೇಳಿದ್ದೆ: ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಅವರೇ ಟೈಂ ಬಾಂಬ್‌ ಫಿಕ್ಸ್‌ ಮಾಡಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದೆ. ಅದನ್ನೇ ಈಗ ಎಚ್‌.ಡಿ.ದೇವೇಗೌಡ ದೃಢಪಡಿಸಿದ್ದಾರೆ’ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್‌ ಜತೆ ಸೇರಿ ಮೈತ್ರಿ ಸರ್ಕಾರ ರಚಿಸುವುದು ಸಿದ್ದರಾಮಯ್ಯ ಅವರಿಗೆ ಎಳ್ಳಷ್ಟೂ ಇಷ್ಟವಿರಲಿಲ್ಲ. ತಮ್ಮ ಬೆಂಬಲಿಗರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುವ ಮೂಲಕ ಸರ್ಕಾರ ಕೆಡವಿದರು’ ಎಂದು ದೂರಿದರು.

‘ಏಳು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿರುವ ಬಸವರಾಜ ಹೊರಟ್ಟಿ ಅವರೇ ಮಂತ್ರಿಯಾಗಿರಲಿಲ್ಲ. ಅವರ ಭವಿಷ್ಯವೇ ಅವರಿಗೆ ಗೊತ್ತಿಲ್ಲ. ಇನ್ನು ಉಮೇಶ ಕತ್ತಿ ಅವರನ್ನು ಮಂತ್ರಿ ಮಾಡ್ತಾರಾ’ ಎಂದು ವ್ಯಂಗ್ಯವಾಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು