ಮಂಗಳವಾರ, ಆಗಸ್ಟ್ 3, 2021
27 °C

ಕೈಗಾರಿಕೆ ಉಳಿದರೆ ಕಾರ್ಮಿಕರು: ಜಗದೀಶ್ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೈಗಾರಿಕೆಗಳು ಉಳಿದರೆ ಕಾರ್ಮಿಕರೂ ಉಳಿಯುತ್ತಾರೆ. ಹಾಗಾಗಿ, ಸರ್ಕಾರ ಉದ್ಯಮಿಗಳು ಹಾಗೂ ಕಾರ್ಮಿಕರ ಸಮಾನ ಹಿತಾಸಕ್ತಿಗೆ ಪೂರಕವಾಗಿ ನಿಯಮಗಳನ್ನು ರೂಪಿಸಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ದೇವಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೋದ್ಯಮಿಗಳ ಜತೆ ಮಾತುಕತೆ ನಡೆಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಕೊರೊನಾದ ಸಂಕಷ್ಟದ ಸಮಯದಲ್ಲಿ ಕೈಗಾರಿಕೆಗಳಿಗೆ ಹೆಚ್ಚಿನ ನೆರವು ಒದಗಿಸಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ. ಕೈಗಾರಿಕೆಗಳಿಗೆ ಪೂರಕವಾಗಿ ಈಚೆಗೆ ಕೆಲವು ತಿದ್ದುಪಡಿ ಮಾಡಲಾಗಿದೆ. ಉದ್ದಿಮೆ ಸ್ಥಾಪಿಸಲು ಮುಂದೆ ಬರುವವರು ಅನುಮತಿ ಪತ್ರ ಪಡೆದರೆ ಸಾಕು. ಮೂರು ವರ್ಷಗಳವರೆಗೆ ಪರವಾನಗಿ ಪಡೆಯುವ ಅಗತ್ಯವಿಲ್ಲ. ಕಟ್ಟಡ ಸೇರಿದಂತೆ ಎಲ್ಲ ರೀತಿಯ ಮೂಲ ಸೌಕರ್ಯ ಕಲ್ಪಿಸಿಕೊಳ್ಳಬಹುದು. ಸಾಲ ಸೌಲಭ್ಯ ಸೇರಿದಂತೆ ನೆರವು ಪಡೆಯಬಹುದು ಎಂದರು. 

ಕೊರೊನಾ ವೈರಸ್‌ ವ್ಯಾಪಕವಾಗಿ ಹರಡುತ್ತಿದ್ದರೂ ಲಾಕ್‌ಡೌನ್‌ ಮಾಡದಿರಲು ನಿರ್ಧರಿಸಲಾಗಿದೆ. ಜೀವ ಹಾಗೂ ಜೀವನ ಎರಡೂ ಮುಖ್ಯ. ಎಲ್ಲ ಜನರ ನಿತ್ಯದ  ಬದುಕೂ ಸಾಗಬೇಕಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು