ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದೀಖಾನೆ, ಅಗ್ನಿಶಾಮಕ ಸಿಬ್ಬಂದಿ ವೇತನವೂ ಪರಿಷ್ಕರಣೆ: ಔರಾದಕರ್‌

ಮುಖ್ಯಮಂತ್ರಿ ಸ್ಪಂದನೆ: ರಾಘವೇಂದ್ರ ಔರಾದಕರ್‌ ಹೇಳಿಕೆ
Last Updated 15 ಜೂನ್ 2019, 17:19 IST
ಅಕ್ಷರ ಗಾತ್ರ

ಕಲಬುರ್ಗಿ: ‘ಪೊಲೀಸರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಬಂದೀಖಾನೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೂ ವಿಸ್ತರಿಸುವಂತೆ ಮುಖ್ಯಮಂತ್ರಿ ಅವರನ್ನು ಕೋರಿದ್ದು, ಅವರಿಂದಸಕಾರಾತ್ಮಕ ಪ್ರತಿಕ್ರಿಯೆ ದೊರೆಯುವ ನಿರೀಕ್ಷೆ ಇದೆ’ ಎಂದು ರಾಜ್ಯ ಪೊಲೀಸ್‌ ಗೃಹ ನಿರ್ಮಾಣ ನಿಗಮದ ಅಧ್ಯಕ್ಷ ರಾಘವೇಂದ್ರ ಔರಾದಕರ್‌ ಹೇಳಿದರು.

‘ಬಂದೀಖಾನೆ, ಅಗ್ನಿಶಾಮಕ ಸಿಬ್ಬಂದಿಯ ವೇತನ ಪರಿಷ್ಕರಣೆಯೂ ಸೇರಿದಂತೆ ಪೊಲೀಸರಿಗೆ ಕಲ್ಪಿಸಬೇಕಿರುವ ಸೌಲಭ್ಯಗಳ ಬಗ್ಗೆ ನನ್ನ ವರದಿಯಲ್ಲಿ ಸರ್ಕಾರಕ್ಕೆಮನವರಿಕೆ ಮಾಡಿಕೊಡಲಾಗಿದೆ’ ಎಂದು ಶನಿವಾರ ಇಲ್ಲಿ ಪ್ರತಿಕ್ರಿಯಿಸಿದರು.

‘ರಾಜ್ಯದಲ್ಲಿ ಒಟ್ಟು 11 ಸಾವಿರ ಪೊಲೀಸ್‌ ವಸತಿಗೃಹಗಳ ನಿರ್ಮಾಣ ಕಾರ್ಯ ನಡೆದಿದೆ. ಮೊದಲ ಹಾಗೂ ಎರಡನೇ ಹಂತದಲ್ಲಿ ತಲಾ 4 ಸಾವಿರ ಮನೆಗಳ ನಿರ್ಮಾಣ ಬಹುತೇಕ ಪೂರ್ಣಗೊಂಡು ಹಸ್ತಾಂತರ ಮಾಡಲಾಗಿದೆ. 3ನೇ ಹಂತದ 3 ಸಾವಿರ ಮನೆಗಳ ನಿರ್ಮಾಣ ಕಾರ್ಯ ಕಾನೂನು ತೊಡಕಿನಿಂದಾಗಿವಿಳಂಬವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT