ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮಖಂಡಿ ವಿಧಾನಸಭಾ ಕ್ಷೇತ್ರ ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಯಕರ ಸಾಥ್‌

Last Updated 16 ಅಕ್ಟೋಬರ್ 2018, 7:49 IST
ಅಕ್ಷರ ಗಾತ್ರ

ಜಮಖಂಡಿ: ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್- ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಮಂಗಳವಾರ ಆನಂದ ನ್ಯಾಮಗೌಡ ಬಂದರು.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಜೆಡಿಎಸ್ ಮುಖಂಡರಾದ ಎಸ್.ಕೆ.ಬೆಳ್ಳುಬ್ಬಿ ಹಾಗೂ ಬಸವರಾಜ ಕೊಣ್ಣೂರ ಇದ್ದರು.

ಬಿಜೆಪಿ ಅಭ್ಯರ್ಥಿ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಶ್ರೀಕಾಂತ ಕುಲಕರ್ಣಿ ಅವರನ್ನು ಮಿನಿವಿಧಾನಸೌಧಕ್ಕೆ ಮೆರವಣಿಗೆಯಲ್ಲಿ ಕರೆತರಲಾಯಿತು. ಸಂಸದ ಪ್ರಹ್ಲಾದ ಜೋಶಿ, ಶಾಸಕರಾದ ಗೋವಿಂದ ಕಾರಜೋಳ, ವೀರಣ್ಣ ಚರಂತಿಮಠ ಮೆರವಣಿಗೆಯಲ್ಲಿ ಕುಲಕರ್ಣಿ ಅವರಿಗೆ ಸಾಥ್ ನೀಡಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಯಡಿಯೂರಪ್ಪ ಜಮಖಂಡಿಗೆ ಬರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT