ಶನಿವಾರ, ಜನವರಿ 18, 2020
26 °C

ಜ.17ರಿಂದ ಖಾಸಗಿ ಶಾಲಾ – ಕಾಲೇಜು ಬಂದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜ.17ರಿಂದ ರಾಜ್ಯದಾದ್ಯಂತ ಖಾಸಗಿ ಶಾಲಾ– ಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್‌ ಮಾಡಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ಮಾಧ್ಯಮಿಕ ನೌಕರರ ಸಂಘ ನಿರ್ಧರಿಸಿದೆ.

ನಗರದಲ್ಲಿ ಶುಕ್ರವಾರ ನಡೆದ ವಿವಿಧ ಮಠಾಧೀಶರ, ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಹಾಗೂ ನೌಕರರ ಹೋರಾಟ ಸಮನ್ವಯ ಸಮಿತಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

1995ರ ನಂತರ ಆರಂಭವಾದ ಖಾಸಗಿ ಶಾಲೆಗಳಿಗೆ ಅನುದಾನಿತ, ಅನುದಾನ ರಹಿತ ಎನ್ನುವುದನ್ನು ಕೈಬಿಡಬೇಕು, ಸರ್ಕಾರಿ ಶಾಲೆಗಳಿಗೆ ನೀಡುವ ಸೌಲಭ್ಯಗಳನ್ನು ಖಾಸಗಿ ಶಾಲೆಗಳಿಗೂ ನೀಡಬೇಕು, ಎನ್‌ಪಿಎಸ್‌ ರದ್ದತಿ, ಕಾಲ್ಪನಿಕ ವೇತನ ಜಾರಿ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸುವ ನಿರ್ಣಯ ಕೈಗೊಳ್ಳಲಾಯಿತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು