ಸೋಮವಾರ, ಜೂನ್ 1, 2020
27 °C

2018ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: 2018-2019ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ 30 ಹಿರಿಯ ಕಲಾವಿದರ ಹೆಸರುಗಳನ್ನು ಅಕಾಡೆಮಿ ಅಧ್ಯಕ್ಷ ಬಿ.ಟಾಕಪ್ಪ ಕಣ್ಣೂರ ಭಾನುವಾರ ಪ್ರಕಟಿಸಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಲಾವಿದರ ಹೆಸರನ್ನು ಘೋಷಿಸಿದ ಅವರು, ‘ಉತ್ತಮ ಕಲಾವಿದರನ್ನು, ಕಲೆಗಾಗಿ ಬದುಕು ಮುಡಿಪಾಗಿಟ್ಟವರನ್ನು ಆಯ್ಕೆ ಮಾಡಿದ್ದೇವೆ’ ಎಂದು ಹೇಳಿದರು.

ರಾಜ್ಯದ 30 ಜಿಲ್ಲೆಗಳ 30 ಹಿರಿಯ ಕಲಾವಿದರಿಗೆ ಹಾಗು ಇಬ್ಬರು ಜಾನಪದ ತಜ್ಞರಿಗೆ ವಾರ್ಷಿಕ ಗೌರವ ಪ್ರಶಸ್ತಿ ನೀಡಲಾಗಿದೆ. ಗೌರವ ಪ್ರಶಸ್ತಿ ಮೊತ್ತ 25,000 ರೂ. ಇಬ್ಬರು ಕ್ಷೇತ್ರ ತಜ್ಞರಿಗೆ ತಲಾ 50,000 ರೂ. ಜೊತೆಗೆ ಸ್ಮರಣಿಕೆ ನೀಡಲಾಗುವುದು.

ಸುದ್ದಿಗೋಷ್ಠಿಯಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ಸಿದ್ರಾಮ ಸಿಂಧೆ, ಸದಸ್ಯರಾದ ವಿಜಯಕುಮಾರ ಸೋನಾರೆ, ಪ್ರಕಾಶ ಅಂಗಡಿ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು