ಬೆಂಗಳೂರು: ‘ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಪಟ್ಟಿಗೆ ಹೆಸರು ಸೇರ್ಪಡೆ ಸೇವೆಗಳನ್ನು ಸಕಾಲ ಯೋಜನೆಯ ‘ಜನಸೇವಕ’ ಅಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿವೆ. ಈ ಸೇವೆಗಳನ್ನು ಶೀಘ್ರದಲ್ಲಿ ಜನಸೇವಕ ವ್ಯಾಪ್ತಿಗೆ ತರಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು

ಕೋವಿಡ್ 19 ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿಗದ್ದ ನಾಗರಿಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ ‘ಜನಸೇವಕ’ ಯೋಜನೆಯನ್ನು ಮತ್ತೆ ಆರಂಭಿಸುವ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಅಧಿಕಾರಿಗಳು ಹಾಗೂ ಬೆಂಗಳೂರು ವ್ಯಾಪ್ತಿಯ ಶಾಸಕರ ಸಭೆಯಲ್ಲಿ ಸಚಿವರು ಮಾತನಾಡಿದರು.

ಸದ್ಯ ‘ಜನಸೇವಕ’ ಯೋಜನೆ ಬೆಂಗಳೂರು ನಗರದ ರಾಜಾಜಿನಗರ, ಬೊಮ್ಮನಹಳ್ಳಿ, ಮಹದೇವಪುರ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ಜಾರಿಯಲ್ಲಿದೆ. ಆದಾಯ, ಜಾತಿ ಪ್ರಮಾಣಪತ್ರ, ಹಿರಿಯ ನಾಗರಿಕರ ಪಿಂಚಣಿ, ಕಾರ್ಮಿಕ, ಆರೋಗ್ಯ, ಪೊಲೀಸ್ ಸೇರಿದಂತೆ 50 ಸೇವೆಗಳನ್ನು ಒದಗಿಸಲಾಗುತಿತ್ತು. ಇನ್ನು ಮುಂದೆ ಈ ವ್ಯಾಪ್ತಿಗೆ ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಪಟ್ಟಿಗೆ ಹೆಸರು ನೋಂದಣಿ ಸೇವೆಗಳನ್ನು ತರಲಾಗುವುದು’ ಎಂದು ಸಚಿವರು ಹೇಳಿದರು.

‘ಆಧಾರ್ ಸಂಖ್ಯೆಯು ಇತ್ತೀಚಿಗೆ ಎಲ್ಲ ವ್ಯವಹಾರಕ್ಕೂ ಅಗತ್ಯವಾಗಿದೆ. ಹಿರಿಯ ನಾಗರಿಕರು, ಅಸಹಾಯಕರು ಈ ಸೇವೆಗಳನ್ನು ಪಡೆದುಕೊಳ್ಳಲು ಪರದಾಡುವಂತಾಗಿದೆ. ಇದನ್ನು ಗಣನೆಗೆ ತೆಗೆದುಕೊಂಡು ಆಧಾರ್ ನೋಂದಣಿ ಮತ್ತು ಆಧಾರ್ ತಿದ್ದುಪಡಿ ಸೇವೆಗಳನ್ನು ಕೂಡಾ ಜನಸೇವಕ ವ್ಯಾಪ್ತಿಗೆ ತರಲಾಗುತ್ತಿದೆ’ ಎಂದು ಅವರು ವಿವರಿಸಿದರು.

‘ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವೃದ್ಧರು, ಅನಾರೋಗ್ಯ ಪೀಡಿತರು ಸುರಕ್ಷಿತವಾಗಿ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಎಲ್ಲ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಈ ಸೇವೆಗಳನ್ನು ಮತ್ತೆ ಆರಂಭಿಸುವ ಬಗ್ಗೆ ನಿರ್ಧರಿಸಲಾಗಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

‘ಜನಸೇವಕ ಯೋಜನೆ ಮತ್ತೆ ಆರಂಭಿಸುವ ಮತ್ತು ಆಧಾರ್ ನೋಂದಣಿಯಂಥ ಸೇವೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಶಾಸಕರು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕು’ ಎಂದು ಸುರೇಶ್ ಕುಮಾರ್ ಮನವಿ ಮಾಡಿದರು.

ಶಾಸಕರಾದ ಸತೀಶ್ ರೆಡ್ಡಿ (ಬೊಮ್ಮನಹಳ್ಳಿ), ಮಂಜುನಾಥ್ (ದಾಸರಹಳ್ಳಿ) ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.