ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
‘ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕುಮಾರಸ್ವಾಮಿ ಅವರು ಮತ್ತು ಡಾ. ಪರಮೇಶ್ವರ ಅವರನ್ನು ಅಭಿನಂದಿಸುತ್ತೇನೆ. ಅವರ ಮುಂದಿನ ಆಡಳಿತಕ್ಕೆ ಶುಭಾಶಯ ಕೋರುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
I congratulate Shri @hd_kumaraswamy Ji and @DrParameshwara Ji on taking oath as Chief Minister and Deputy Chief Minister of Karnataka. My best wishes for their tenure ahead.