ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.11ಕ್ಕೆ ‘ಗೈಡಿಂಗ್ ಫೋರ್ಸ್‌’

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ತಜ್ಞರ ಮಾರ್ಗದರ್ಶನ
Last Updated 8 ಜನವರಿ 2020, 20:17 IST
ಅಕ್ಷರ ಗಾತ್ರ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕೆಂಬ ಆಕಾಂಕ್ಷೆಗಳನ್ನು ಹೊಂದಿರುವವರಿಗೆ ವಿಷಯತಜ್ಞರಿಂದ ಅಗತ್ಯ ಮಾರ್ಗದರ್ಶನ ಒದಗಿಸಲು ಶನಿವಾರ (ಜ.11) ಬೆಳಿಗ್ಗೆ 10.30ಕ್ಕೆ ‘ಗೈಡಿಂಗ್ ಫೋರ್ಸ್‌’ ಕಾರ್ಯಕ್ರಮವನ್ನು ವಿಜಯ
ನಗರದ ಬಂಟರ ಸಂಘದಲ್ಲಿ ಆಯೋಜಿಸಲಾಗಿದೆ.

‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್‌’ ಜಂಟಿಯಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ‘ಇನ್‌ಸೈಟ್‌’ ಸಂಸ್ಥೆಯ ಸಹಯೋಗ
ವಿದೆ. ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಆರ್.ವೇಣುಗೋಪಾಲ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಹಾಗೂ ವೈಟ್‌ಫೀಲ್ಡ್‌ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ವಿಶೇಷ ಭಾಷಣ ಮಾಡಲಿದ್ದಾರೆ. ‘ಇನ್‌ಸೈಟ್‌’ ಸಂಸ್ಥೆಯ ವಿಷಯ ತಜ್ಞರುಐಎಎಸ್‌ ಹಾಗೂ ಐಪಿಎಸ್ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ.

ಐಎಎಸ್‌ ಹಾಗೂ ಐಪಿಎಸ್ ಪರೀಕ್ಷೆ ತೆಗೆದುಕೊಂಡಿರುವ ಮತ್ತು ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, 1,500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಅಂದು ಬೆಳಿಗ್ಗೆ 9.30ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಪ್ರವೇಶ ಉಚಿತ.

ಗೊಂದಲ ನಿವಾರಣೆ: ಸಾಮಾನ್ಯವಾಗಿ ಐಎಎಸ್ ಹಾಗೂ ಐಪಿಎಸ್ ಪರೀಕ್ಷೆ ಎದುರಿಸುವವರಿಗೆ ವಿಷಯಗಳ ಆಯ್ಕೆಯಲ್ಲಿ ಗೊಂದಲ
ಗಳು ಇರಲಿವೆ. ಈ ಬಗ್ಗೆ ಅಭ್ಯರ್ಥಿಗಳು ತಜ್ಞರನ್ನು ಪ್ರಶ್ನಿಸಿ, ಪರಿಹಾರ ಕಂಡುಕೊಳ್ಳಲೂ ಅವಕಾಶ ನೀಡಲಾಗುತ್ತದೆ. ಅದೇ ರೀತಿ, ಪರೀಕ್ಷೆಗೂ ಮುನ್ನ ಮಾಡಿಕೊಳ್ಳಬೇಕಾದ ತಯಾರಿ, ಪುನರಾವಲೋಕನ ವಿಧಾನ, ಸಮಯ ಹೊಂದಾಣಿಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿಗಳು ಒಂದೇ ಸೂರಿನಡಿ ದೊರೆಯಲಿವೆ.

ಮಾನಸಿಕ ಒತ್ತಡಗಳಿಂದ ಹೊರಬರಲು ಏನು ಮಾಡಬೇಕು ಎಂಬುದರ ಬಗ್ಗೆಯೂ ತಜ್ಞರು ಸಲಹೆಗಳನ್ನು ನೀಡುತ್ತಾರೆ. ನೋಂದಣಿ ಹಾಗೂ ವಿವರಕ್ಕೆ ಮೊ.9448701058.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT