ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾರಿಗೆ ಬಸ್ ಡಿಕ್ಕಿ 7 ಮಂದಿ ಸಾವು

Last Updated 21 ಮೇ 2018, 19:30 IST
ಅಕ್ಷರ ಗಾತ್ರ

ಶಿರಾ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಜೈ ಹಿಂದ್ ಡಾಬಾ ಬಳಿ ನಿಂತಿದ್ದ ಲಾರಿಗೆ ಯಾತ್ರಿಗಳಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದರಿಂದ 7 ಮಂದಿ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ನಡೆದ ಈ ಅಪಘಾತದಲ್ಲಿ 16 ಮಂದಿ ಗಾಯಗೊಂಡಿದ್ದಾರೆ.

7 ವರ್ಷದ ಬಾಲಕಿ, ನಾಲ್ವರು ಮಹಿಳೆಯರು, ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಮೃತಪಟ್ಟವರು, ಗಾಯಗೊಂಡವರು ಎಲ್ಲರೂ ಶಿರಾ ತಾಲ್ಲೂಕಿಗೆ ಸೇರಿದವರಾಗಿದ್ದಾರೆ.

ಹನುಮಾನ್ ಟ್ರಾವೆಲ್ಸ್‌ ಬಸ್‌ನಲ್ಲಿ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದರು. ರಾತ್ರಿ 12 ಗಂಟೆ ಹೊತ್ತಿಗೆ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT