ಶನಿವಾರ, ಅಕ್ಟೋಬರ್ 19, 2019
22 °C

200 ಮಂದಿಗೆ ಉಚಿತ ಸ್ಟೆಂಟ್‌ ಅಳವಡಿಕೆ

Published:
Updated:

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ 200 ಮಂದಿಗೆ ಉಚಿತ ಸ್ಟೆಂಟ್‌ ಅಳವಡಿಸುವ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಆಂಜಿಯೋಪ್ಲಾಸ್ಟಿ ಕಾರ್ಯಾಗಾರವು ಅಕ್ಟೋಬರ್‌ 11ರಿಂದ 14ರವರೆಗೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಾಗೂ ಅಕ್ಟೋಬರ್‌ 15 ಮತ್ತು 16ರಂದು ಮೈಸೂರಿನಲ್ಲಿ ನಡೆಯಲಿದೆ.

‘ಈಗಾಗಲೇ ಆ್ಯಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟ ರೋಗಿಗಳು ಈ ಸೌಲಭ್ಯ ಪಡೆಯಬಹುದು. ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್‌ ಕಾರ್ಡ್‌ ಅಥವಾ ಆದಾಯ ಪ್ರಮಾಣ ಪತ್ರ ಹೊಂದಿರಬೇಕು’ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್‌ ತಿಳಿಸಿದ್ದಾರೆ. ಆಸಕ್ತರು ಅ. 1ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.

ಸಂಪರ್ಕಕ್ಕೆ– ಬೆಂಗಳೂರು–8431239166, ಮೈಸೂರು ಶಾಖೆ–7892293016.

 

Post Comments (+)