ಬೆಂಗಳೂರು: ಐಎಂಎ ಹಗರಣದ ಕುರಿತು ತ್ವರಿತವಾಗಿ ತನಿಖೆ ನಡೆಸುವುದಕ್ಕಾಗಿ ಹೆಚ್ಚುವರಿ ನ್ಯಾಯಾಲಯಗಳನ್ನು ರಚಿಸುವ ಚಿಂತನೆ ಇದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ವಿಧಾನ ಪರಿಷತ್ನಲ್ಲಿ ಮಂಗಳವಾರ ಸಂವಿಧಾನ ಕುರಿತು ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರಿ ದೊಡ್ಡ ಹಗರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸುವ ಅಗತ್ಯ ಇದೆ, ಹೀಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ಅಧಿಕಾರವನ್ನು ಸಂವಿಧಾನವು ಶಾಸನ ಸಭೆಗಳಿಗೆ ನೀಡಿದೆ. ಇದನ್ನು ಬಳಸಿಕೊಳ್ಳಲಾಗುತ್ತದೆಎಂದರು.

ವಿಶೇಷ ನ್ಯಾಯಾಲಯಗಳ ಸ್ಥಾಪನೆ ಕುರಿತಂತೆ ಮೂವರು ಶಾಸಕರು ಈಗಾಗಲೇ ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತಂದಿದ್ದಾರೆ ಎಂದು ಹೇಳಲಾಗಿದೆ.

ಈ ಮಧ್ಯೆ, ಸಂವಿಧಾನದ ಆಶಯಗಳ ಕುರಿತು ಸುದೀರ್ಘವಾಗಿ ಮಾತನಾಡಿದ ಸಚಿವರು, ಮಹಾತ್ಮ ಗಾಂಧೀಜಿ ಕೇವಲ ರಾಜಕೀಯ ಸ್ವಾತಂತ್ರ್ಯಕ್ಕಾಗಿ ಹೋರಾಡಲಿಲ್ಲ, ಅವರು ಮಾತನಾಡದ ವಿಷಯವೇ ಇಲ್ಲ, ಆದರೆ ಹಳ್ಳಿಯ ಜನ ಎರಡನೇ ದರ್ಜೆ ನಾಗರಿಕರಂತೆ ಜೀವನ ನಡೆಸುವ ಭಾವನೆ ಬರುತ್ತಿದ್ದು, ಇದು ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾದುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.