ಭಾನುವಾರ, ಮಾರ್ಚ್ 29, 2020
19 °C

ಮಹಾ ಸರ್ಕಾರ ರಚನೆ | ಜೆಡಿಎಸ್ ಸೇರಿ ಯಾರಲ್ಲೂ ನೈತಿಕತೆ ಉಳಿದಿಲ್ಲ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇಶದಲ್ಲಿ ಇಂದು ಯಾವ ರಾಜಕೀಯ ಪಕ್ಷದಲ್ಲೂ ನೈತಿಕತೆ ಉಳಿದಿಲ್ಲ. ಅದರ ಫಲವಾಗಿಯೇ ಮಹಾರಾಷ್ಟ್ರದಲ್ಲಿ ಪರಸ್ಪರ  ವಿರೋಧ ಸಿದ್ಧಾಂತ ಹೊಂದಿರುವ ಪಕ್ಷಗಳಿಂದ ಸರ್ಕಾರ ರಚನೆಯಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.  ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಶನಿವಾರ ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿದ ಬಳಿಕ ಯಶವಂತಪುರ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳುವ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿ, ತಮ್ಮ ಪಕ್ಷ ಜೆಡಿಎಸ್‌ ಅನ್ನೂ ಸೇರಿಸಿಕೊಂಡೇ ಯಾರಲ್ಲೂ ನೈತಿಕತೆ ಉಳಿದಿಲ್ಲ ಎಂದು ಹೇಳುತ್ತಿರುವುದಾಗಿ ತಿಳಿಸಿದರು.

ಇದನ್ನು ಓದಿ: ಕ್ಷಿಪ್ರ ಬೆಳವಣಿಗೆ: ಫಡಣವೀಸ್‌ 'ಮಹಾ' ಸಿಎಂ, ಅಜಿತ್‌ ಪವಾರ್‌ ಉಪಮುಖ್ಯಮಂತ್ರಿ

ಜಿತ್ ಪವಾರ್, ಶರದ್ ಪವಾರ್ ವಿರುದ್ಧ ಸೊಸೈಟಿಗಳಿಗೆ ಸಾವಿರಾರು ಕೋಟಿ ಮೋಸ ಮಾಡಿದ ಆರೋಪಗಳಿವೆ. ಈ ಸಂಬಂಧ ಇ.ಡಿ. ನೋಟಿಸ್ ಸಹ ಜಾರಿಯಾಗಿದೆ. ಆದರೆ ಬಿಜೆಪಿ -ಎನ್‌ಸಿಪಿ ಮೈತ್ರಿ ಸರ್ಕಾರ ಬಂದ ಕಾರಣ ಇನ್ನು ಈ ಹಗರಣದ ತನಿಖೆ ನಡೆಯುತ್ತದೆಯೇ ಎಂದು ಪ್ರಶ್ನಿಸಿದರು.

ಯಾರಿಗೂ ಬೆಂಬಲ ಇಲ್ಲ:  ಜೆಡಿಎಸ್ ನಿಲುವು ಅಸ್ಪಷ್ಟವಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷ ಕಾಂಗ್ರೆಸ್‌ಗೂ ಬೆಂಬಲ ನೀಡುವುದಿಲ್ಲ, ಬಿಜೆಪಿಗೂ ಬೆಂಬಲ ಕೊಡುವುದಿಲ್ಲ. ಜನರ ಒಳಿತೇ ಪಕ್ಷದ ಗುರಿ ಎಂದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಶನಿವಾರ ಬೆಂಗಳೂರಿನಲ್ಲಿ
ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದರು.

ಇನ್ನಷ್ಟು... 

ರಾಜ್ಯಕ್ಕೆ ಸ್ಥಿರ ಸರ್ಕಾರ ಬೇಕು, ಕಿಚಡಿ ಸರ್ಕಾರವಲ್ಲ ಎಂದ ದೇವೇಂದ್ರ ಫಡಣವೀಸ್ 

'ಮಹಾ' ಸರ್ಕಾರಕ್ಕೆ ಶುಭ ಕೋರಿದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ 

ಮಹಾ ಜನರ ಬೆನ್ನಿಗೆ ಚೂರಿ ಹಾಕಿದ  ಅಜಿತ್‌ ಪವಾರ್‌: ಸಂಜಯ್‌ ರಾವುತ್‌ 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು