ಶನಿವಾರ, ಫೆಬ್ರವರಿ 29, 2020
19 °C

ಪಕ್ಷ ಸಂದಿಗ್ಧ ಪರಿಸ್ಥಿತಿಯಲ್ಲಿದೆ: ಕಾರ್ಯಕರ್ತರಿಗೆ ದೇವೇಗೌಡರ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೆಡಿಎಸ್‌ ಅನ್ನು ಮತ್ತೆ ಸಂಘಟಿಸಲು ಮುಂದಾಗಿರುವ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರು ಇದೇ ಗುರುವಾರ (ಜ.23) ರಂದು ಸಮಾವೇಶ ಹಮ್ಮಿಕೊಂಡಿದ್ದಾರೆ. 

ಪಕ್ಷದ ಚುನಾಯಿತ ಪ್ರತಿನಿಧಿಗಳು, ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದವರು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯರ್ತರಿಗೆ ಅವರು ಪತ್ರ ಬರೆದು ಸಮಾವೇಶಕ್ಕೆ ಆಹ್ವಾನಿಸಿದ್ದಾರೆ. 

ಈ ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖಂಡರು ಕಾರ್ಯಕರ್ತರ ಭಾವನೆಗಳಿಗೆ ನಿರೀಕ್ಷಿತ ರೀತಿಯಲ್ಲಿ ಸ್ಪಂಧಿಸಲು ಸಾಧ್ಯವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸೋಲುಗಳನ್ನು ಮೆಟ್ಟಿ ಗ್ರಾಮ ಮಟ್ಟದಿಂದ ಪಕ್ಷವನ್ನು ಬಲಪಡಿಸಬೇಕು ಎಂದು ಪತ್ರದಲ್ಲಿ ಹೇಳಿರುವ ದೇವೇಗೌಡರು, ಪಕ್ಷ ಸಂದಿಗ್ಧ ಸ್ಥಿತಿಯಲ್ಲಿದೆ ಎಂದೂ ನೋವು ತೋಡಿಕೊಂಡಿದ್ದಾರೆ. ಪಕ್ಷದ ಮುಂದಿನ ಹೋರಾಟದ ರೂಪು ರೇಷೆ ಚರ್ಚಿಸಲು ಸಮಾವೇಶ ನಡೆಸುತ್ತಿರುವುದಾಗಿ ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ. 

ಇದೇ 23ರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಇದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರೂ ಭಾಗವಹಿಸಲಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು