ಸೋಮವಾರ, ಜೂನ್ 21, 2021
27 °C

ಪ್ರಶಾಂತ್ ಕಿಶೋರ್ ಜೊತೆಗೂಡಿ ಜೆಡಿಎಸ್ ಚುನಾವಣಾ ತಂತ್ರ: ಎಚ್.ಡಿ. ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರಾಮನಗರ: ಮುಂದಿನ ಚುನಾವಣೆಯಲ್ಲಿ ಸ್ವತಂತ್ರವಾಗಿ  ಅಧಿಕಾರಕ್ಕೆ ಬರಲು ಈಗಿನಿಂದಲೇ ಸಿದ್ಧತೆ‌ ನಡೆಸಿದ್ದೇವೆ. ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಸಂಪರ್ಕದಲ್ಲಿ ಇದ್ದೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ರಾಮನಗರದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಐಎಎಸ್ ಅಧಿಕಾರಿ‌ ಬದಲು ಮಂತ್ರಿ ಮನೆಯ ಜವಾನರಾಗಿ‌ ಕೆಲಸ ಮಾಡುತ್ತಿದ್ದಾರೆ‌. ಕೋರ್ಟ್ ಆದೇಶಗಳನ್ನೂ ಧಿಕ್ಕರಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಜೆಡಿಎಸ್ ಕಾರ್ಯಕರ್ತರು ಟಾರ್ಗೆಟ್ ಆಗಿದ್ದಾರೆ. ಅಧಿಕಾರಿ‌ ನಡವಳಿಕೆ ಬಗ್ಗೆ ಸರ್ಕಾರದ ಗಮನಕ್ಕೂ ತಂದಿದ್ದೇನೆ ಎಂದರು.

ಮಹದಾಯಿ‌ ವಿಚಾರದಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಮುಂದಿನ ಕೆಲಸಗಳನ್ನೂ ಮಾಡಬೇಕು. ಮೇಕೆದಾಟು ಯೋಜನೆ ಬಗ್ಗೆಯೂ‌ ನೀರಾವರಿ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ. ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಇಂದಲ್ಲ ನಾಳೆ ಈ ಯೋಜನೆ ಆಗಲೇಬೇಕು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು