ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಚಿವ, ಜೆಡಿಎಸ್ ನಾಯಕ ಸಿ.ಚನ್ನಿಗಪ್ಪ ನಿಧನ

Last Updated 21 ಫೆಬ್ರುವರಿ 2020, 4:22 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಮುಖಂಡ ಸಿ.ಚನ್ನಿಗಪ್ಪ (70) ಶುಕ್ರವಾರ ಬೆಳಿಗ್ಗೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಕಳೆದ ಕೆಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ನಗರದಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದಕ್ಕೂ ಮೊದಲು ಅವರಿಗೆ ಸಿಂಗಪುರದಲ್ಲೂ ಚಿಕಿತ್ಸೆ ಕೊಡಿಸಲಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಭೈರನಾಯಕನಹಳ್ಳಿಯವರಾದಚನ್ನಿಗಪ್ಪಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಿದ್ದರು.ಕೊರಟಗೆರೆ ಕ್ಷೇತ್ರದಿಂದ ಮೂರು ಬಾರಿ ಗೆಲುವು ಸಾಧಿಸಿದ್ದರು.

2006ರ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕೊರಟಗೆರೆ ಮೀಸಲು ಕ್ಷೇತ್ರವಾದ ನಂತರ ಪಕ್ಕದ ಮಧುಗಿರಿ ಕ್ಷೇತ್ರದಲ್ಲಿ ರಾಜಕೀಯ ನೆಲೆ ಕಂಡುಕೊಂಡಿದ್ದರು. ಜೆಡಿಎಸ್‌ ತುಮಕೂರು ಜಿಲ್ಲಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಚನ್ನಿಗಪ್ಪ, ಮಧುಗಿರಿ ಮತ್ತು ದೊಡ್ಡಬಳ್ಳಾಪುರದಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಹುಟ್ಟೂರು ಭೈರನಾಯಕನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT