ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಮತ್ತು ನಗರ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ ಜೆಡಿಎಸ್ ಅಭ್ಯರ್ಥಿಗಳ ಸಭೆಯನ್ನು ಜೂನ್ 21ರಂದು ಬೆಳಿಗ್ಗೆ 10 ಗಂಟೆಗೆ ನಗರದ ಅರಮನೆ ಮೈದಾನದಲ್ಲಿ ಕರೆಯಲಾಗಿದೆ.
ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪಾಲ್ಗೊಳ್ಳುವ ಈ ಸಭೆಯ ಅಧ್ಯಕ್ಷತೆಯನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ವಹಿಸುವರು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.