ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಂತರ ಚುನಾವಣೆಗೂ ಸಿದ್ಧರಾಗಿ: ಜೆಡಿಎಸ್‌ ಸೂಚನೆ

Last Updated 24 ಜುಲೈ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರ ಪತನಗೊಂಡು ಅನಿಶ್ಚಿತ ವಾತಾವರಣ ನಿರ್ಮಾಣವಾಗಿರುವುದರಿಂದ ಮಧ್ಯಂತರ ಚುನಾವಣೆ ಎದುರಾದರೂ ಸಿದ್ಧರಾಗಿರಲು ಪಕ್ಷದ ಕಾರ್ಯಕರ್ತರಿಗೆ ಜೆಡಿಎಸ್‌ ಸೂಚನೆ ನೀಡಿದೆ.

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ವಿಧಾನಸಭೆಯಲ್ಲಿ ಸಮರ್ಥ ಪ್ರತಿಪಕ್ಷವಾಗಿ ಕಾರ್ಯ ನಿರ್ವಹಿಸಬೇಕು. ಜತೆಗೆ ಪಕ್ಷವನ್ನು ಸಂಘಟಿಸಲು ಎಲ್ಲ ನಾಯಕರೂ ಮುಂದಾಗಬೇಕು ಎಂದು ಸೂಚಿಸಲಾಯಿತು.

ಕಾಂಗ್ರೆಸ್‌ ಜತೆ ಮೈತ್ರಿ ಮುಂದುವರಿಸಬೇಕೆ, ಬೇಡವೇ ಎಂಬ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೆ ನೀಡಲಾಯಿತು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ತೆರಳಿರುವ ಪಕ್ಷದ ಮೂವರು ಶಾಸಕರನ್ನು ಅನರ್ಹಗೊಳಿಸಲು
ಸಭಾಧ್ಯಕ್ಷರಿಗೆ ಅರ್ಜಿ ಸಲ್ಲಿಸಬೇಕು. ಈ ಮೂಲಕ ಅವರಿಗೆ‍ಪಾಠ ಕಲಿಸಬೇಕು ಎಂದು ಸಭೆಯಲ್ಲಿ ಮುಖಂಡರು ಒತ್ತಾಯಿಸಿದರು.

ಸಭೆಯಲ್ಲಿ ಉಸ್ತುವಾರಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರ ಸ್ವಾಮಿ, ಪಕ್ಷದ ನಾಯಕರಾದ ಎಚ್‌.ಡಿ.ರೇವಣ್ಣ, ಸಿ.ಎಸ್‌.ಪುಟ್ಟರಾಜು, ವೆಂಕಟರಾವ್‌ ನಾಡಗೌಡ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT