ಸ್ಥಳೀಯ ಸಂಸ್ಥೆಗಳ ಗೆಲುವಿಗೆ ಜೆಡಿಎಸ್‌ ಮಹತ್ವದ ಸಭೆ

7

ಸ್ಥಳೀಯ ಸಂಸ್ಥೆಗಳ ಗೆಲುವಿಗೆ ಜೆಡಿಎಸ್‌ ಮಹತ್ವದ ಸಭೆ

Published:
Updated:

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಜೆಡಿಎಸ್‌ ಸೋಮವಾರ ವಿಶೇಷ ಸಭೆ ಹಮ್ಮಿಕೊಂಡಿದೆ.

ಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎಚ್‌.ವಿಶ್ವನಾಥ್‌ ನೇತೃತ್ವದಲ್ಲಿ ಪ್ರತ್ಯೇಕ ತಂಡ ಚುನಾವಣಾ ಪ್ರಚಾರ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ಆ.16 ಮತ್ತು 17 ರಂದು ದಿನ ಚೆನ್ನಾಗಿರುವುದರಿಂದ ಆ ದಿನಗಳಲ್ಲಿ ನಾಮ ಪತ್ರ ಸಲ್ಲಿಸಲು ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದರು.

ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಬಗ್ಗೆ ಹೆಚ್ಚು ಟೀಕೆ– ಟಿಪ್ಪಣಿ ಮಾಡದಿರಲು ನಿರ್ಧರಿಸಲಾಗಿದೆ. ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !