ಬೆಂಗಳೂರು:ಪಾದರಾಯನಪುರದ ಗಲಭೆಕೋರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣವೇ ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು ಎಂದು ಶುಕ್ರವಾರ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಅವರು ಮುಂದಾಗಬಹುದಾದ ಅನಾಹುತದ ಬಗ್ಗೆ ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು. ಜಾಣಕಿವುಡು ಪ್ರದರ್ಶಿಸಿದ ರಾಜ್ಯಸರ್ಕಾರ ಕರೋನ ಸೋಂಕನ್ನು ಜಿಲ್ಲೆಗೆ ಹಂಚಿದ್ದು ಸರೀನಾ? ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ ಎಂದು ಅನಿತಾ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ, ಉಪಮುಖ್ಯಮಂತ್ರಿ ಹಾಗೂ ವೈದ್ಯರು ಆಗಿರುವಡಾ.ಅಶ್ವಥ್ ನಾರಾಯಣ ಅವರು ಹಾರಿಕೆಯ ಹೇಳಿಕೆಗಳ ನೀಡುವುದು ಬಿಟ್ಟು ಜವಾಬ್ದಾರಿತನದಿಂದ ವರ್ತಿಸಲಿ. ವಾಸ್ತವ ಸ್ಥಿತಿಯನ್ನು ಅರಿತು ಪ್ರತಿಕ್ರಿಯಿಸಲಿ. ಜಿಲ್ಲೆಯ ಜನತೆಯೊಂದಿಗೆ ಚೆಲ್ಲಾಟ ಮಾಡುವುದನ್ನು ಬಿಡಲಿ ಎಂದು ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸರ್ಕಾರದ ಬೇಜವಾಬ್ದಾರಿತನವನ್ನು ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ತಕ್ಷಣ ರಾಮನಗರ ಮಾರ್ವಾಡಿ ಕೈದಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಜಿಲ್ಲೆಯಾದ್ಯಂತ ಕರೋನಾ ಸೋಂಕು ಹರಡದಂತೆ ಅಗತ್ಯ ವೈದ್ಯಕೀಯ ಮುನ್ನೆಚ್ಚರಿಕೆ ವಹಿಸಬೇಕು ಇಲ್ಲದಿದ್ದರೆ ಬೀದಿಗಿಳಿದು ಜಿಲ್ಲೆಯ ಜನತೆಯ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.

ರಾಮನಗರ ಜೈಲಿನಲ್ಲಿ ಇರಿಸಲಾದ ಕೈದಿಗಳಲ್ಲಿ ಇಬ್ಬರಿಗೆ ಮಾತ್ರವಲ್ಲದೆ ಇತರ ಕೆಲವರಿಗೂ ಕರೋನಾ ಹಬ್ಬಿರುವ ಮಾಹಿತಿ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.