ಬುಧವಾರ, ಜನವರಿ 22, 2020
19 °C
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸೇರಿ ಹಲವು ನಾಯಕರಿಂದ ಸಿದ್ದರಾಮಯ್ಯ ಭೇಟಿ

ನಾನು, ಸಿದ್ದರಾಮಯ್ಯ ವೈರಿಗಳಲ್ಲ: ಎಚ್. ವಿಶ್ವನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಾನು ಮತ್ತು ಸಿದ್ದರಾಮಯ್ಯ ವೈರಿಗಳೆಂಬಂತೆ ಮಾಧ್ಯಮಗಳಲ್ಲಿ ಬಿಂಬಿಸಲಾಗುತ್ತಿದೆ. ಆದರೆ ನಾವು ವೈರಿಗಳಲ್ಲ, ನಮ್ಮ ನಡುವೆ ಸ್ನೇಹ ಇದ್ದೇ ಇದೆ’ ಎಂದು ಮಾಜಿ ಶಾಸಕ ಎಚ್. ವಿಶ್ವನಾಥ್ ಹೇಳಿದರು.

ಅವರು ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ನಗರದ ಆಸ್ಪತ್ರೆಯಲ್ಲಿರುವ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಈ ವೇಳೆ ಸಚಿವ ಸಿ.ಟಿ.ರವಿ, ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ ಸಹ ಜತೆಗಿದ್ದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಗೆಲುವು ಸಾಧಿಸಿದ್ದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರೂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಆದರೆ, ಕಾಂಗ್ರೆಸ್‌ನ ಪ್ರಮುಖ ನಾಯಕರೇ ಸಿದ್ದರಾಮಯ್ಯ ಭೇಟಿಗೆ ಬರದೆ ಇರುವ ಬಗ್ಗೆ ಚರ್ಚೆ ನಡೆಯುತ್ತಿದೆ. ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು.


ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ 

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು