ಎಚ್.ಕೆ.ಕುಮಾರಸ್ವಾಮಿ ಜೆಡಿಎಸ್ ಅಧ್ಯಕ್ಷ, ಮಧು ಬಂಗಾರಪ್ಪ ಕಾರ್ಯಾಧ್ಯಕ್ಷ

ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ಸಕಲೇಶಪುರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಹಾಗೂ ಮಧು ಬಂಗಾರಪ್ಪ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಇದೇ ವೇಳೆ ಪಕ್ಷದ ರಾಜ್ಯ ಘಟಕಕ್ಕೆ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಮಾಜಿ ಸಚಿವ ಎನ್.ಎಂ.ನಬಿ, ಶಾಸಕ ಕೆ.ಗೋಪಾಲಯ್ಯ, ಆರ್.ಮಂಜುನಾಥ್ ಅವರನ್ನು ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮಾಜಿ ಶಾಸಕ ಸುರೇಶ್ ಬಾಬು ರಾಜ್ಯ ಬೂತ್ ಸಮಿತಿಯ ಅಧ್ಯಕ್ಷ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ನಾಸಿರ್ ಬಾಗವಾನ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಯುವ ಜನತಾ ದಳದ ಅಧ್ಯಕ್ಷರಾಗಿ ನಿಖಿಲ್ ಕುಮಾರ ಸ್ವಾಮಿ, ಕಾರ್ಯಾಧ್ಯಕ್ಷರಾಗಿ ನೂರ್ ಅಹಮ್ಮದ್, ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಶರಣಗೌಡ ಕಂದಕೂರು ನೇಮಕವಾಗಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.