ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹10 ಕೋಟಿ ಕೊಟ್ಟವರ ಹೆಸರು ಗ್ರಾಮಕ್ಕೆ: ಬಿಎಸ್‌ವೈ ಪ್ರಸ್ತಾವಕ್ಕೆ ಜೆಡಿಎಸ್ ಖಂಡನೆ

Last Updated 15 ಆಗಸ್ಟ್ 2019, 7:54 IST
ಅಕ್ಷರ ಗಾತ್ರ

ಬೆಂಗಳೂರು: ಪ್ರವಾಹ ಪೀಡಿತ ಗ್ರಾಮಗಳ ಪುನರ್‌ ನಿರ್ಮಾಣಕ್ಕೆ ₹10 ಕೋಟಿಗೂ ಹೆಚ್ಚು ದೇಣಿಗೆ ನೀಡುವ ಉದ್ಯಮಗಳ ಹೆಸರನ್ನೇ ಗ್ರಾಮಗಳಿಗೆ ನಾಮಕರಣ ಮಾಡುವ ಸಿಎಂ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಜೆಡಿಎಸ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ ಎಂದು ಟೀಕಿಸಿದೆ.

ಬುಧವಾರ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಮಾತನಾಡಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ ಅವರು, ‘ಪ್ರವಾಹದಿಂದಾಗಿ ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ. ಇವರ ನೆರವಿಗೆ ಕೈಗಾರಿಕೋದ್ಯಮಿಗಳು ಮುಂದಾಗಬೇಕು. ಉದಾತ್ತವಾಗಿ ದೇಣಿಗೆ ನೀಡಬೇಕು. ಹತ್ತು ಕೋಟಿ ನೀಡಿದರೆ. ಅವರ ಉದ್ಯಮದ ಹೆಸರನ್ನು ಗ್ರಾಮಕ್ಕೆ ಇಡಲಾಗುವುದು,’ಎಂದು ಹೇಳಿದ್ದರು.

ಇದೇ ಹಿನ್ನೆಲೆಯಲ್ಲಿ ಇಂದು ಟ್ವೀಟ್‌ ಮಾಡಿರುವ ಜೆಡಿಎಸ್‌ ‘ಹತ್ತು ಕೋಟಿ ದೇಣಿಗೆ ನೀಡಿದ ಕಂಪೆನಿಗಳ ಹೆಸರನ್ನು ಗ್ರಾಮಗಳಿಗೆ ಇಡುವ ಮುಖ್ಯಮಂತ್ರಿ ಬಿಎಸ್‌ವೈ ನಿರ್ಧಾರತುಘಲಕ್ ನಿರ್ಧಾರದಂತಿದೆ. ನಮ್ಮ ರಾಜ್ಯದ ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಆದ ಹಿನ್ನೆಲೆಯಿದೆ. ನೆರೆಯಿಂದ ಎಲ್ಲವನ್ನೂ ಕಳೆದುಕೊಂಡಿರುವವರಿಗೆ ತಮ್ಮ ಗ್ರಾಮದ ಹೆಸರನ್ನೂ ಕಳೆದುಕೊಳ್ಳುವಂತೆ ಮಾಡಬೇಡಿ. ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ,’ ಎಂದು ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT