ಜೆಡಿಎಸ್‌ ತ್ಯಜಿಸಲು ಮಾಜಿ ಸಚಿವ ಜೀವಿಜಯ ನಿರ್ಧಾರ

ಶನಿವಾರ, ಮಾರ್ಚ್ 23, 2019
34 °C

ಜೆಡಿಎಸ್‌ ತ್ಯಜಿಸಲು ಮಾಜಿ ಸಚಿವ ಜೀವಿಜಯ ನಿರ್ಧಾರ

Published:
Updated:
Prajavani

ಮಡಿಕೇರಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೊಡಗು ಜಿಲ್ಲಾ ಜೆಡಿಎಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಮಾಜಿ ಸಚಿವ ಬಿ.ಎ.ಜೀವಿಜಯ ಪಕ್ಷ ತ್ಯಜಿಸಲು ನಿರ್ಧರಿಸಿದ್ದಾರೆ. 

ಇನ್ನೆರಡು ದಿನಗಳಲ್ಲಿ ತಮ್ಮ ಬೆಂಬಲಿಗರೊಂದಿಗೆ ಬೆಂಗಳೂರಿಗೆ ತೆರಳಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಕೆ.ಎಂ.ಬಿ.ಗಣೇಶ್‌ ಅವರನ್ನು ಸೋಮವಾರ ನೇಮಕ ಮಾಡಿದ್ದೇ ಈ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ. ಗಣೇಶ್‌ ಅವರು ಜೆಡಿಎಸ್‌ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿದ್ದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಡಗೂರು
ಎಚ್‌.ವಿಶ್ವನಾಥ್‌ ಬೆಂಬಲಿಗರು.

‘ವಿಧಾನಸಭೆ ಚುನಾವಣೆಯಲ್ಲಿ ಗಣೇಶ್‌ ನನ್ನ ವಿರುದ್ಧ ಕೆಲಸ ಮಾಡಿದ್ದರು. ಅವರಿಗೆ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡಬಾರದೆಂದು ವರಿಷ್ಠರ ಗಮನಕ್ಕೂ ತರಲಾಗಿತ್ತು. ಆದರೆ,ನಮ್ಮ ಮಾತಿಗೆ ಬೆಲೆ ನೀಡಿಲ್ಲ. ನಮ್ಮ ದಾರಿ ನಾವು ನೋಡಿಕೊಳ್ಳುತ್ತೇವೆ’ ಎಂದು ಜೀವಿಜಯ ಹೇಳಿದರು.

 

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !