ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಸೀಮಿತವಾಗಿ ಎಟಿಎಸ್: ಬೊಮ್ಮಾಯಿ

ಪೊಲೀಸ್‌ ಅಧಿಕಾರಿಗಳ ಜೊತೆ ಗೃಹ ಸಚಿವರ ಸಭೆ
Last Updated 15 ಅಕ್ಟೋಬರ್ 2019, 20:07 IST
ಅಕ್ಷರ ಗಾತ್ರ

ಬೆಂಗಳೂರು: ಜಮಾತ್‌ ಉಲ್‌ ಮುಜಾಹಿದೀನ್‌ ಬಾಂಗ್ಲಾದೇಶ (ಜೆಎಂಬಿ) ಉಗ್ರಗಾಮಿ ಸಂಘಟನೆ ತನ್ನ ಜಾಲ ವಿಸ್ತರಿಸಿಕೊಳ್ಳಲು ಬೆಂಗಳೂರು ನಗರವನ್ನು ನೆಲೆಯಾಗಿ ಬಳಸಿಕೊಳ್ಳುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ನವೆಂಬರ್‌ ಒಂದರಿಂದ ಬೆಂಗಳೂರಿಗೆ ಸೀಮಿತವಾಗಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರಂಭಿಸಲಿದೆ.

ನಗರ ಪೊಲೀಸ್‌ ಕಮಿಷನರೇಟ್‌ನ ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ‘ಉಗ್ರರು ಬೆಂಗಳೂರಿನಲ್ಲಿ 20ರಿಂದ 22 ಅಡುಗುತಾಣಗಳನ್ನು ಮಾಡಿಕೊಂಡಿದ್ದಾರೆ ಎನ್ನುವ ಎನ್‌ಐಎ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದ ಸೂಕ್ಷ್ಮ ಹಾಗೂ ಕರಾವಳಿ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಎನ್‌ಐಎ ಸೇರಿದಂತೆ, ಕೇಂದ್ರದ ಪಡೆಗಳ ಜೊತೆ ಸಂಪರ್ಕ ಸಾಧಿಸಿ, ಉಗ್ರಗಾಮಿ ಚಟುವಟಿಕೆ ತಲೆಎತ್ತದಂತೆ ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿರುವುದಾಗಿ ಹೇಳಿದರು.

ಸೈಬರ್ ಸೆಲ್: ನಗರದ ಡಿಸಿಪಿ ಕಚೇರಿಗಳ ವ್ಯಾಪ್ತಿಯಲ್ಲಿ ಸೈಬರ್ ಸೆಲ್ ಸ್ಥಾಪಿಸಿ, ಆರ್ಥಿಕ ಅಪರಾಧಗಳು, ಮಾದಕ ವಸ್ತುಗಳ ಜಾಲ ಹಾಗೂ ಆನ್‌ಲೈನ್ ಅಪರಾಧಗಳ ಪತ್ತೆಗೆ ಕ್ರಮಕೈಗೊಳ್ಳುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT