ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಗಿಮಟ್ಟಿ ವನ್ಯಜೀವಿ ಧಾಮ: ಸುಪ್ರೀಂ ಕೋರ್ಟ್‌ ತೀರ್ಪು ಉಲ್ಲಂಘನೆ

Last Updated 20 ಮಾರ್ಚ್ 2019, 6:08 IST
ಅಕ್ಷರ ಗಾತ್ರ

ಚಿತ್ರದುರ್ಗ: ಜೋಗಿಮಟ್ಟಿ ವನ್ಯಜೀವಿ ಧಾಮವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಿದ ಸುಪ್ರೀಂ ಕೋರ್ಟ್‌, 10 ಕಿ.ಮೀ ವ್ಯಾಪ್ತಿಯಲ್ಲಿ ಅಭಿವೃದ್ಧಿ ಚಟುವಟಿಕೆ ನಿರ್ಬಂಧಿಸಿ ನೀಡಿದ ತೀರ್ಪನ್ನು ಸರ್ಕಾರವೇ ಉಲ್ಲಂಘಿಸಲು ಮುಂದಾಗಿದೆ.

‘ಪರಿಸರ ಸೂಕ್ಷ್ಮ ವಲಯಕ್ಕೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಿ ಅಭಿವೃದ್ಧಿಗೆ ಅಡ್ಡಿಪಡಿಸಲಾಗುತ್ತಿದೆ’ ಎಂಬ ಸ್ಟೋನ್‌ ಕ್ರಷರ್‌ ಹಾಗೂ ಕಟ್ಟಡ ಕಲ್ಲು ಉದ್ದಿಮೆದಾರರ ದೂರಿನ ಆಧಾರದ ಮೇರೆಗೆ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೊರಡಿಸಿದ ಆದೇಶ ಇಂತಹ ಅನುಮಾನ ಹುಟ್ಟುಹಾಕಿದೆ.

‘ಪರಿಸರ ಸೂಕ್ಷ್ಮ ವಲಯದಲ್ಲಿ ಹೆಚ್ಚಿನ ನಿರ್ಬಂಧಗಳನ್ನು ಹೇರಬಾರದು’ ಎಂದು ಡಿ.ಸಿ ಹಾಗೂ ಡಿಸಿಎಫ್‌ಗಳಿಗೆ ತಾಕೀತು ಮಾಡಲಾಗಿದೆ.

ಸುಪ್ರೀಂ ಕೋರ್ಟ್‌, ‘ಪರಿಸರ ಸೂಕ್ಷ್ಮ ವಲಯಗಳಲ್ಲಿ ಯಾವುದೇ ವಾಣಿಜ್ಯ ಮತ್ತು ಇತರ ಚಟುವಟಿಕೆ ನಡೆಸಬಾರದು’ ಎಂದು ಡಿ.10ರಂದು ಆದೇಶ ಹೊರಡಿಸಿತ್ತು. ಗಣಿಗಾರಿಕೆ, ಸಾ ಮಿಲ್‌, ಪರಿಸರ ಮಾಲಿನ್ಯಕ್ಕೆ ಕಾರಣ ವಾಗುವ ಕೈಗಾರಿಕೆಗಳನ್ನು ಆರಂಭಿಸಲು, ಕಟ್ಟಿಗೆಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು,ಬೃಹತ್‌ ಜಲ ವಿದ್ಯುತ್‌ ಉತ್ಪಾದನಾ ಘಟಕಗಳನ್ನು ಪರಿಸರ ಸೂಕ್ಷ್ಮವಲಯದಲ್ಲಿ ಸ್ಥಾಪಿಸಲು ಅವಕಾಶ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT