ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಂಸಿಯಲ್ಲಿ ಸೋಮವಾರ ಒಪಿಡಿ ಬಂದ್

ತುರ್ತು ಸೇವೆ ಲಭ್ಯ: ವೈದ್ಯಕೀಯ ಅಧೀಕ್ಷಕರ ಸ್ಪಷ್ಟನೆ
Last Updated 15 ಜೂನ್ 2019, 12:38 IST
ಅಕ್ಷರ ಗಾತ್ರ

ಉಡುಪಿ: ಈಚೆಗೆ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಸ್ಥೆ ಜೂನ್ 17ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ 6ರಿಂದ ಮಂಗಳವಾರ ಬೆಳಿಗ್ಗೆ 6ರವರೆಗೆ ಹೊರರೋಗ ವಿಭಾಗದ ಚಿಕಿತ್ಸೆ ಲಭ್ಯವಿರುವುದಿಲ್ಲ ಎಂದು ಆಸ್ಪತ್ರೆ ತಿಳಿಸಿದೆ.

ಉಡುಪಿಯ ಡಾ.ಟಿ.ಎಂ.ಎ ಪೈ ಆಸ್ಪತ್ರೆ, ಕಾರ್ಕಳದ ಡಾ.ಟಿ.ಎಂ.ಎ ಪೈ ಆಸ್ಪತ್ರೆಯ ಹೊರ ರೋಗಿ ವಿಭಾಗದ ಸೌಲಭ್ಯ ಲಭ್ಯವಿರುವುದಿಲ್ಲ. ಆದರೆ, ತುರ್ತು ಚಿಕಿತ್ಸೆಗಳು ಎಂದಿನಂತೆ ಲಭ್ಯವಿರಲಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ ಶೆಟ್ಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT