ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾ. ನಾಗಮೋಹನ್‌ದಾಸ್‌ಗೆ ‘ಜಯದೇವಶ್ರೀ ಪ್ರಶಸ್ತಿ’

ಕುಂ.ವೀ., ಸಿ.ಆರ್‌. ಯರವಿನತೆಲಿಮಠ, ಭವ್ಯಾರಾಣಿ ಅವರಿಗೂ ಪ್ರಶಸ್ತಿ
Last Updated 3 ಜನವರಿ 2019, 19:45 IST
ಅಕ್ಷರ ಗಾತ್ರ

ದಾವಣಗೆರೆ: ಜಯದೇವ ಮುರುಘರಾಜೇಂದ್ರ ಸ್ವಾಮೀಜಿ ಅವರ 62ನೇ ಸ್ಮರಣೋತ್ಸವದ ಅಂಗವಾಗಿ ನೀಡುವ ‘ಜಯದೇವ ಪ್ರಶಸ್ತಿ’ಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ಅವರನ್ನು ಆಯ್ಕೆ ಮಾಡಲಾಗಿದೆ.

‘ಶೂನ್ಯಪೀಠ ಚನ್ನಬಸವ ಪ್ರಶಸ್ತಿ’ಗೆ ಸಾಹಿತಿ ಕುಂ.ವೀರಭದ್ರಪ್ಪ, ‘ಶೂನ್ಯಪೀಠ ಅಲ್ಲಮ ಪ್ರಶಸ್ತಿ’ಗೆ ಸಾಹಿತಿ ಡಾ.ಸಿ.ಆರ್‌.ಯರವಿನತೆಲಿಮಠ, ‘ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿ’ಗೆ ಸಮಾಜಸೇವಕಿ ಭವ್ಯಾರಾಣಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.

ಇಲ್ಲಿನ ಶಿವಯೋಗಾಶ್ರಮದ ಬಸವಕೇಂದ್ರದಲ್ಲಿ ಜ.18ರಿಂದ 20ರ ವರೆಗೆ ನಡೆಯಲಿರುವ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರತಿ ಪ್ರಶಸ್ತಿಯು ₹ 25 ಸಾವಿರ ನಗದು ಹೊಂದಿರುತ್ತದೆ. ಮುರುಘಾ ಶರಣರು ಪ್ರಶಸ್ತಿ ಪ್ರದಾನ ಮಾಡುವರು. ಇಳಕಲ್‌ ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಗೃಹಸಚಿವ ಎಂ.ಬಿ. ಪಾಟೀಲ್‌, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಅತಿಥಿಗಳಾಗಿರುವರು ಎಂದು ಸ್ವಾಮೀಜಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT