ಬುಧವಾರ, ಫೆಬ್ರವರಿ 26, 2020
19 °C

ಖರ್ಗೆಯಷ್ಟು ಚುನಾವಣೆ ಗೆದ್ದವರು ಯಾರಿದ್ದೀರಿ: ಕೆ.ಎಚ್‌.ಮುನಿಯಪ್ಪ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಂ ಬಳಿಕ ಅತಿ ಹೆಚ್ಚು ಚುನಾವಣೆಯಲ್ಲಿ ಗೆಲುವು ಸಾಧಿಸಿದ ಏಕೈಕ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ. ಅವರಂತೆ 11 ಬಾರಿ ಗೆಲುವು ಸಾಧಿಸಿದವರು ಬಿಜೆಪಿಯಲ್ಲಿ ಯಾರಿದ್ದೀರಿ ಹೇಳಿ ಎಂದು ಕಾಂಗ್ರೆಸ್ ಮುಖಂಡ ಕೆ.ಎಚ್‌.ಮುನಿಯಪ್ಪ ಬಿಜೆಪಿ ನಾಯಕರಿಗೆ ಸವಾಲು ಹಾಕಿದರು.

‘ಖರ್ಗೆ ರಾಜಕೀಯವಾಗಿ ಆರಿದ ದೀಪ’ ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಟೀಕೆಗೆ ಮನಿಯಪ್ಪ ಸೋಮವಾರ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಟೀಲ್‌ ಇನ್ನೂ ಚಿಕ್ಕವರು. ಘನತೆಗೆ ತಕ್ಕಂತೆ ಮಾತನಾಡುವ ಸಂಸ್ಕೃತಿ ಕಲಿಯುವ ಅಗತ್ಯವಿದೆ. ಅನುಭವದ ಕೊರತೆ ಇರುವಂತೆ ಕಾಣುತ್ತಿದೆ. ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ, ಬಿಜೆಪಿ ನಾಯಕ ಎಲ್‌.ಕೆ.ಅಡ್ವಾಣಿ ಚುನಾವಣೆಯಲ್ಲಿ ಸೋಲು ಕಂಡಿರಲಿಲ್ಲವೇ?’ ಎಂದು ಕುಟುಕಿದರು.

‘ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತರುವ ಎಲ್ಲ ಯೋಜನೆ, ಕಾಯ್ದೆಗಳು ಜನವಿರೋಧಿಯಾಗಿವೆ. ಉತ್ತರ ಭಾರತದಲ್ಲಿ ಇತ್ತೀಚೆಗೆ ನಡೆದ ಹಲವು ಚುನಾವಣೆಯಲ್ಲಿ ಬಿಜೆಪಿ ಸೋಲು ಕಾಣುತ್ತಿದೆ. ಹಿಂದೂ–ಮುಸ್ಲಿಮರನ್ನು ಒಡೆದಾಳಲು ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ದೇಶದ ಜನರು ಮೋದಿಗೆ ಪಾಠ ಕಲಿಸುವ ಸಮಯ ಬಂದಿದೆ’ ಎಂದು ಗುಡುಗಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು