ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

Last Updated 4 ಏಪ್ರಿಲ್ 2020, 14:05 IST
ಅಕ್ಷರ ಗಾತ್ರ

ವಿಜಯಪುರ: ಏಪ್ರಿಲ್‌ 12ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಣೆಯಾಗಿರುವುದರಿಂದ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ‌ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕೆ-ಸೆಟ್ ಪರೀಕ್ಷಾ ನೋಡಲ್ ಅಧಿಕಾರಿ ಪ್ರೊ.ನಾಮದೇವ ಗೌಡ ಹೇಳಿದ್ದಾರೆ.

ವಿಜಯಪುರ ಕೇಂದ್ರದಲ್ಲಿ ಒಟ್ಟು 6,150 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. ಇದಕ್ಕಾಗಿ ಮಹಿಳಾ ವಿಶ್ವವಿದ್ಯಾನಿಲಯ ಸೇರಿದಂತೆ ವಿಜಯಪುರ ನಗರದ ವಿವಿಧ ಕಾಲೇಜುಗಳಲ್ಲಿ 263 ಬ್ಲಾಕ್‍ಗಳನ್ನು ಗುರುತಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಪರೀಕ್ಷೆ ನಡೆಯುವ ದಿನಾಂಕವನ್ನು ಮುಂಬರುವ ದಿನಗಳಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕೇಂದ್ರ ಕೆ-ಸೆಟ್ ಪರೀಕ್ಷಾ ನೋಡಲ್ ಅಧಿಕಾರಿಗಳು ಪ್ರಕಟಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT