ಗುರುವಾರ , ಜೂಲೈ 9, 2020
21 °C

ಕೆ–ಸೆಟ್‌ ಮತ್ತೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜೂನ್‌ 21ರಂದು ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ಕೆ–ಸೆಟ್‌) ಮುಂದೂಡಲಾಗಿದೆ.

‘ಪರೀಕ್ಷೆ ನಡೆಸಲು ಇನ್ನೂ ಅನುಮತಿ ಸಿಕ್ಕಿಲ್ಲ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ದಿನಾಂಕ ನಿಗದಿಯಾದ ಮೇಲೆ ಕೆ–ಸೆಟ್‌ ವೆಬ್‌ಸೈಟ್‌ನಲ್ಲಿ (http://kset.uni-mysore.ac.in) ಪ್ರಕಟಿಸಲಾಗುವುದು’ ಎಂದು ಮೈಸೂರು ವಿಶ್ವವಿದ್ಯಾಲಯದ ಕೆ–ಸೆಟ್ ಸಂಯೋಜನಾಧಿಕಾರಿ ಪ್ರೊ.ಎಚ್.ರಾಜಶೇಖರ್ ತಿಳಿಸಿದ್ದಾರೆ.

ಈ ಮೊದಲು ಏಪ್ರಿಲ್‌ 12ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಲಾಕ್‌ಡೌನ್‌ ಕಾರಣದಿಂದ ಮುಂದೂಡಲಾಗಿತ್ತು. ಇದೀಗ ಎರಡನೇ ಬಾರಿ ಮುಂದಕ್ಕೆ ಹಾಕಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು