ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜು ಕೊಳದಲ್ಲಿ ಸುಧಾಕರ್, ರಾಜೀನಾಮೆಗೆ ಆಗ್ರಹಿಸಿದ ಶಿವಕುಮಾರ್‌

Last Updated 13 ಏಪ್ರಿಲ್ 2020, 8:32 IST
ಅಕ್ಷರ ಗಾತ್ರ
ADVERTISEMENT
""

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ಆತಂಕ ಸೃಷ್ಟಿಸಿರುವ ನಡುವೆಯೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿರುವ ಈಜುಕೊಳದಲ್ಲಿ ಮಕ್ಕಳೊಂದಿಗೆ ಈಜಾಡುವಚಿತ್ರವನ್ನು ಟ್ವೀಟ್‌ಮಾಡುವ ಮೂಲಕ ವಿರೋಧ ಪಕ್ಷದವರ ಟೀಕೆಗೆ ಗುರಿಯಾಗಿದ್ದಾರೆ.

ಭಾನುವಾರ ಬೆಳಿಗ್ಗೆ ತಮ್ಮ ಮೂರು ಮಕ್ಕಳೊಂದಿಗೆ ಈಜಾಟವಾಡುತ್ತಿದ್ದ ಚಿತ್ರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದ ಸುಧಾಕರ್ ಅವರು, ' ಬಹಳ ಸಮಯದ ನಂತರ ನನ್ನ ಮಕ್ಕಳೊಂದಿಗೆ ಈಜಲು ಸೇರಿರುವೆ. ಇಲ್ಲೂ ಸಾಮಾಜಿಕ ಅಂತರ ಕಾಯ್ದುಕೊಂಡಿರುವೆ' ಎಂದು ಬರೆದುಕೊಂಡಿದ್ದರು.

ಸುಧಾಕರ್ ಅವರ ಈ ಟ್ವಿಟ್ ಕುರಿತು ಟೀಕಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

'ಇಡೀ ಜಗತ್ತು ಆರೋಗ್ಯ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಕೊರೊನಾಉಸ್ತುವಾರಿ ಸಚಿವ ಡಾ.ಸುಧಾಕರ್ ಈಜುಕೊಳದಲ್ಲಿ ಸಮಯ ಕಳೆಯುವ ಮೂಲಕ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇದು ನೈತಿಕತೆಯ ವಿಚಾರ. ಸುಧಾಕರ್ ಅವರು ಸ್ವ ಇಚ್ಛೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳುಅವರನ್ನು ಮಂತ್ರಿಮಂಡಲದಿಂದ ವಜಾಗೊಳಿಸಬೇಕು' ಎಂದು ಶಿವಕುಮಾರ್ ಅವರು ಟ್ವೀಟ್‌ಮಾಡುವ ಮೂಲಕ ಒತ್ತಾಯಿಸಿದ್ದಾರೆ.

ಇದರ ಬೆನ್ನಲ್ಲೇ ತಮ್ಮ ಟ್ವೀಟ್‌ವಿವಾದ ಸೃಷ್ಟಿಸುತ್ತದೆ ಎಂಬುದು ಅರಿವಿಗೆ ಬರುತ್ತಿದ್ದಂತೆ ಸುಧಾಕರ್ಅದನ್ನು ತಮ್ಮ ಖಾತೆಯಿಂದ ಅಳಿಸಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT