ಶುಕ್ರವಾರ, ಫೆಬ್ರವರಿ 21, 2020
28 °C
ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಸಿದ್ಧತೆಗಳು ಪೂರ್ಣ

ಕನ್ನಡ ಸಾಹಿತ್ಯ ಸಮ್ಮೇಳನ: ನೌಕರರಿಂದ ₹3 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ನಗರದಲ್ಲಿ ಇದೇ 5ರಿಂದ 7ರವರೆಗೆ ನಡೆಯಲಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ಸರ್ಕಾರಿ ನೌಕರರ ಒಂದು ದಿನದ ವೇತನ ₹3 ಕೋಟಿಯ ಚೆಕ್‌ ಅನ್ನು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಲೇಂಗಟಿ ನೇತೃತ್ವದಲ್ಲಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಶರತ್‌ ಬಿ. ಅವರಿಗೆ ಹಸ್ತಾಂತರಿಸಿದರು.

ಸಮ್ಮೇಳನದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿಲ್ಲ ಎಂದು ಮುನಿಸಿಕೊಂಡಿದ್ದ ಸಂಘದ ಪದಾಧಿಕಾರಿಗಳು, ವಂತಿಗೆ ನೀಡಲು ಹಿಂದೇಟು ಹಾಕಿದ್ದರು.

ಸಿದ್ಧತೆ ಬಹುತೇಕ ಪೂರ್ಣ: ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ನುಡಿ ಜಾತ್ರೆಗಾಗಿ ಭವ್ಯ ವೇದಿಕೆ ಸಿದ್ಧಪಡಿಸಲಾಗಿದ್ದು, ಮೂರು ದಿನಗಳವರೆಗೆ ಸಾಹಿತ್ಯ, ಸಂಸ್ಕೃತಿಯ ಸಂಗಮ ಮೇಳೈಸಲಿದೆ.

ಜಿಲ್ಲೆಯ ಮಳಖೇಡವನ್ನು ರಾಜಧಾನಿಯನ್ನಾಗಿಸಿಕೊಂಡು ಆಳಿದ ರಾಷ್ಟ್ರಕೂಟರ ಕೋಟೆಯನ್ನು ವೇದಿಕೆಗೆ ಹಿನ್ನೆಲೆಯಾಗಿಸಿಕೊಂಡು ನಿರ್ಮಿಸಲಾಗಿದ್ದು, ಆಕರ್ಷಕವಾಗಿದೆ. ವೇದಿಕೆ ಮುಂಭಾಗದಲ್ಲಿ 25 ಸಾವಿರ ಕುರ್ಚಿಗಳನ್ನು ಅಳವಡಿಸುವ ಕಾರ್ಯ ಸೋಮವಾರ ನಡೆದಿತ್ತು. ತಾತ್ಕಾಲಿಕ ಶೌಚಾಲಯಗಳು, ರಸ್ತೆಗಳ ನಿರ್ಮಾಣ, ಸ್ವಾಗತ ಕಮಾನುಗಳ ಅಳವಡಿಕೆ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ಸೋಮವಾರದಿಂದ ಇಲ್ಲಿಯೇ ಬೀಡು ಬಿಟ್ಟಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷ ಎಚ್‌.ಎಸ್‌.ವೆಂಕಟೇಶಮೂರ್ತಿ ಮಂಗಳವಾರ (ಫೆ.4) ಬೆಳಿಗ್ಗೆ ನಗರಕ್ಕೆ ಬರಲಿದ್ದಾರೆ.

ಫೆ 5ರಂದು ಬೆಳಿಗ್ಗೆ ನಗರದ ಎಸ್‌.ಎಂ.ಪಂಡಿತ್‌ ರಂಗಮಂದಿರದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಿ ಅಂದಾಜು 6 ಕಿ.ಮೀ. ಕ್ರಮಿಸಿ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದ ಮುಖ್ಯ ವೇದಿಕೆ ತಲುಪಲಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಧ್ಯಾಹ್ನ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು