ಲೈಂಗಿಕ ದೌರ್ಜನ್ಯ: ಶಿಕ್ಷಕ ಬಂಧನ

7

ಲೈಂಗಿಕ ದೌರ್ಜನ್ಯ: ಶಿಕ್ಷಕ ಬಂಧನ

Published:
Updated:

ಕಲಬುರ್ಗಿ: ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಗರದ ಸರ್ಕಾರಿ ಪ್ರೌಢಶಾಲೆಯೊಂದರ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ರಟಕಲ್‌ (51) ಅವರನ್ನು ನಗರದ ಮಹಿಳಾ ಠಾಣೆ ಪೊಲಿಸರು ಗುರುವಾರ ಬಂಧಿಸಿದ್ದಾರೆ.

ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯುಸಿ) ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ತಿಳಿಸಿದ್ದಾರೆ.

ಆರೋಪಿಯು ಒಂದು ತಿಂಗಳಿನಿಂದ ದೌರ್ಜನ್ಯ ಎಸಗಿದ್ದಾಗಿ ತಿಳಿದು ಬಂದಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !