ಮಂಗಳವಾರ, ಆಗಸ್ಟ್ 3, 2021
23 °C
ಕೊರೊನಾ ಸೋಂಕಿತೆ ಕರೆತರಲು ಹೋದಾಗ ಘರ್ಷಣೆ

ಕಲಬುರ್ಗಿ: ಸಿಬ್ಬಂದಿ ಬೆನ್ನಟ್ಟಿದ ಸ್ಥಳೀಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಸೇಡಂ ತಾಲ್ಲೂಕಿನ ಕೋಲ್ಕುಂದಾ ದೊಡ್ಡ ತಾಂಡಾದಲ್ಲಿ ಕೊರೊನಾ ಸೋಂಕಿತ ಯುವತಿಯನ್ನು ಕಲಬುರ್ಗಿ ಆಸ್ಪತ್ರೆಗೆ ದಾಖಲಿಸುವುದಕ್ಕಾಗಿ ಕರೆತರಲು ತೆರಳಿದ್ದ ಸಿಬ್ಬಂದಿ ಹಾಗೂ ತಾಂಡಾ ನಿವಾಸಿಗಳ ಮಧ್ಯೆ ಘರ್ಷಣೆ ನಡೆದಿದ್ದು, ಇದರಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್ ಹಾಗೂ ತಾಂಡಾ ನಿವಾಸಿ ಗಾಯಗೊಂಡಿದ್ದಾರೆ.

ಗುರುವಾರ ರಾತ್ರಿ ಆಂಬುಲೆನ್ಸ್‌ನೊಂದಿಗೆ ಪೊಲೀಸ್‌ ರಕ್ಷಣೆಯಲ್ಲಿ ತೆರಳಿದ್ದ ಆರೋಗ್ಯ ಸಿಬ್ಬಂದಿ, ಸೋಂಕಿತ 17 ವರ್ಷದ ಯುವತಿ
ಯನ್ನು ಕಳುಹಿಸಿ ಕೊಡುವಂತೆ ಹೇಳಿದಾಗ ಕುಟುಂಬದವರು ಒಪ್ಪಿಲ್ಲ. ಮಾತಿಗೆ ಮಾತು ಬೆಳೆದು ಘರ್ಷಣೆ ನಡೆದಿದೆ. ಗ್ರಾಮಸ್ಥರು ಅಟ್ಟಿಸಿಕೊಂಡು ಬರುತ್ತಿದ್ದ ವೇಳೆ ಕೆಳಗೆ ಬಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಕಾಲಿಗೆ ಪೆಟ್ಟಾಗಿದೆ. ಕಲ್ಲು ತೂರಾಟ ನಡೆಸಿದ್ದರಿಂದ ಆಂಬುಲೆನ್ಸ್‌ನ ಮುಂಭಾಗದ ಗಾಜು ಒಡೆದಿದೆ.

ಶುಕ್ರವಾರ ಬೆಳಿಗ್ಗೆ ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ ಅವರು ಹೆಚ್ಚಿನ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಕರೆದುಕೊಂಡು ಹೋಗಿ ಕುಟುಂಬದ ಸದಸ್ಯರ ಮನವೊಲಿಸಿ ಯುವತಿಯನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು.

ತಾಂಡಾದ ಶ್ರೀನಿವಾಸ ನಾಯಕ ಸೇರಿದಂತೆ 17 ಜನರ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಪ್ರಕರಣ
ದಾಖಲಿಸಿಕೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು