ಶನಿವಾರ, ಜನವರಿ 18, 2020
26 °C
ಕಲ್ಲಡ್ಕದಲ್ಲಿ ಬಾಬರಿ ಮಸೀದಿ ಧ್ವಂಸದ ಅಣಕು ಪ್ರದರ್ಶನ

ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ವಿಡಿಯೊ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಟ್ವಾಳ: ಇಲ್ಲಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿ.15ರಂದು ರಾತ್ರಿ ನಡೆದ ಹೊನಲು ಬೆಳಕಿನ ವಾರ್ಷಿಕ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಅಯೋಧ್ಯೆ ಹೋರಾಟ ಮತ್ತು ಬಾಬರಿ ಮಸೀದಿ ಧ್ವಂಸದ ಅಣಕು ಪ್ರದರ್ಶನದ ವಿಡಿಯೊವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 

ಅಣಕು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಶಾಲಾ ಸಂಸ್ಥಾಪಕ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ಮತ್ತು ನಾಲ್ವರ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪಿಎಫ್‌ಐ ಕಲ್ಲಡ್ಕ ವಲಯ ಅಧ್ಯಕ್ಷ ಅಬೂಬಕ್ಕರ್ ಸಿದ್ದಿಕ್ ದೂರು ನೀಡಿದ್ದರು. ‘ದೂರಿನ ಜೊತೆ ಸಲ್ಲಿಸಿದ್ದ ವಿಡಿಯೊವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು