ಶಾಲಾ ಸಂಪರ್ಕ ಸೇತು ಶೀಘ್ರ ಪೂರ್ಣಗೊಳಿಸಲು ಸೂಚನೆ

ಬುಧವಾರ, ಜೂನ್ 26, 2019
29 °C
‘ಪ್ರಜಾವಾಣಿ’ ವರದಿಯ ಪರಿಣಾಮ

ಶಾಲಾ ಸಂಪರ್ಕ ಸೇತು ಶೀಘ್ರ ಪೂರ್ಣಗೊಳಿಸಲು ಸೂಚನೆ

Published:
Updated:

ಬೆಂಗಳೂರು: ರಾಜ್ಯದಲ್ಲಿ ‘ಶಾಲಾ ಸಂಪರ್ಕ ಸೇತು’ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಪ್ರಗತಿಯನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ವಿಡಿಯೊ ಸಂವಾದದ ಮೂಲಕ ವೀಕ್ಷಿಸಿ, ಬಾಕಿ ಇರುವ ಎಲ್ಲ ಕಾಮಗಾರಿಗಳನ್ನು 2–3 ತಿಂಗಳೊಳಗೆ ಸಂಪೂರ್ಣಗೊಳಿಸಲು ಕಟ್ಟಪ್ಪಣೆ ವಿಧಿಸಿದರು.

ಇದನ್ನೂ ಓದಿ: ಸೇತುವೆ ಕಟ್ಟಲು ಕಾನೂನು ಬಿಡುತ್ತಿಲ್ಲ!

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ವಿಡಿಯೊ ಸಂವಾದ ಹಮ್ಮಿಕೊಳ್ಳಲಾಗಿತ್ತು. ‘ಪ್ರಜಾವಾಣಿ’ ಇತ್ತೀಚೆಗೆ ಪ್ರಕಟಿಸಿದ್ದ ಕಾಲು ಸೇತುವೆಗಳ ಕುರಿತ ‘ಕಾಲು ಸಂಕ(ಟ)’ ವರದಿಯನ್ನು ಸಭೆಯಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿ, ಅಧಿಕಾರಿಗಳಿಂದ ವಿವರಣೆ ಕೇಳಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಿಂದಲೇ ಅಧಿಕಾರಿಗಳು ವಿಡಿಯೊ ಸಂವಾದಕ್ಕೆ ಹಾಜರಾಗಿದ್ದು ಈ ಬಾರಿಯ ವಿಶೇಷ.

ಇದನ್ನೂ ಓದಿ: ಇಲ್ಲದ ಸೇತುವೆ; ನದಿಗೆ ಕಿರುದೋಣಿ ಆಸರೆ​

‘ಕಾಲು ಸಂಕ(ಟ)’ ವರದಿಯ ಹಿನ್ನೆಲೆಯಲ್ಲೇ ಮುಖ್ಯಮಂತ್ರಿಯವರು ಇಂದಿನ ಸಭೆ ಕರೆದಿದ್ದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಹಾಸನ: ಸಾವಿಗೂ ಕರಗದ ಆಡಳಿತ​

ಕಳೆದ ವರ್ಷ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಶಾಲಾ ವಿದ್ಯಾರ್ಥಿನಿ ಆಶಿಕಾ ಕಾಲು ಸಂಕ ದಾಟುವ ಸಂದರ್ಭ ನೀರು ಪಾಲಾಗಿ ಮೃತಪಟ್ಟ ಸುದ್ದಿಯನ್ನು ಗಮನಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಶಾಲಾ ಸಂಪರ್ಕ ಸೇತು ಯೋಜನೆ ಜಾರಿ ಮಾಡಿದರು.  ನದಿ, ಹಳ್ಳ, ತೊರೆಯನ್ನು ದಾಟಲು ಅನುಕೂಲವಾಗುವಂತೆ ನಿರ್ಮಿಸಲಾಗಿದ್ದ ಕಾಲು ಸಂಕಗಳನ್ನು ಬದಲಾಯಿಸಿ ಶಾಶ್ವತವಾದ ಕಿರು 
ಸೇತುವೆಗಳನ್ನು ನಿರ್ಮಿಸುವಂತೆ ಸೂಚಿಸಿ ಆಯವ್ಯಯದಲ್ಲಿ ಅನುದಾನ ಮೀಸಲಿಟ್ಟಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !