ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 10 ಕೋಟಿ ಅನುದಾನಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮನವಿ

ಪತ್ರದ ಮೂಲಕ ಮುಖ್ಯಮಂತ್ರಿ, ಸಚಿವರಿಗೆ ಮನವರಿಕೆ ಮಾಡುವ ಪ್ರಯತ್ನ
Last Updated 12 ಮೇ 2020, 19:50 IST
ಅಕ್ಷರ ಗಾತ್ರ

ಬೆಂಗಳೂರು:ಪ್ರಶಸ್ತಿಗಳು ಹಾಗೂ ವಿದ್ಯಾರ್ಥಿ ವೇತನವನ್ನು ಮುಂದುವರಿಸಲು ₹ 10 ಕೋಟಿ ಅನುದಾನ ನೀಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಮುಖ್ಯಮಂತ್ರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಮನವಿ ಮಾಡಿದ್ದಾರೆ.

2020–21ನೇ ಸಾಲಿನಲ್ಲಿ ಸರ್ಕಾರ ಪ್ರಾಧಿಕಾರಕ್ಕೆ ಕೇವಲ ₹ 2 ಕೋಟಿ ಅನುದಾನ ನೀಡಿದೆ. ಪರಿಣಾಮ ಸರ್ವ
ಸದ್ಯರ ಸಭೆಯಲ್ಲಿ ‘ಕನ್ನಡ ಮಾಧ್ಯಮ ಪ್ರಶಸ್ತಿ’, ‘ನ್ಯಾಯಾಂಗದಲ್ಲಿ ಕನ್ನಡ ಪ್ರಶಸ್ತಿ’ ಹಾಗೂ ಹೊರ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವವರಿಗೆ
ನೀಡುವ ವಿದ್ಯಾರ್ಥಿ ವೇತನ ಸ್ಥಗಿತ ಮಾಡಲು ಪ್ರಾಧಿಕಾರ ನಿರ್ಧರಿಸಿದೆ. ಇದಕ್ಕೆ ಸಾಂಸ್ಕೃತಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಈ ಬಗ್ಗೆ ‘ಪ್ರಜಾವಾಣಿ’ ಸರಣಿ ವರದಿಗಳನ್ನು ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತುಕೊಂಡ ಪ್ರಾಧಿಕಾರ, ಪ್ರಶಸ್ತಿಗಳು ಹಾಗೂ ವಿದ್ಯಾರ್ಥಿ ವೇತನದ ಮಹತ್ವವನ್ನು ಸರ್ಕಾರಕ್ಕೆ ಮನವರಿಕೆ ಮಾಡುವ ಸಂಬಂಧ ಎರಡು ಪುಟಗಳ ಪತ್ರ ಬರೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT