ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಪರೀಕ್ಷೆಗೆ 22 ಸಾವಿರ ವಿದ್ಯಾರ್ಥಿಗಳು ಗೈರು

Last Updated 16 ಮಾರ್ಚ್ 2019, 19:18 IST
ಅಕ್ಷರ ಗಾತ್ರ

ಬೆಂಗಳೂರು:ಶನಿವಾರ ನಡೆದ ದ್ವಿತೀಯ ಪಿ.ಯು. ಕನ್ನಡ ಪರೀಕ್ಷೆಗೆ 21,966 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಈ ಪರೀಕ್ಷೆಗೆ 4,85,988 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,64,022 ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದರು.

ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆ ವದಂತಿ ಇಲಾಖೆ ಸ್ಪಷ್ಟನೆ

ಶನಿವಾರ(ಮಾರ್ಚ್‌ 16) ನಡೆಯಬೇಕಿದ್ದ ದ್ವಿತೀಯ ಪಿ.ಯು. ವಾರ್ಷಿಕ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ರಾತ್ರಿ ಹಬ್ಬಿತ್ತು. ಪರಿಶೀಲನೆ ನಡೆಸಿದ ಪದವಿಪೂರ್ವ ಶಿಕ್ಷಣ ಇಲಾಖೆ ‘ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ’ ಎಂದು ಸ್ಪಷ್ಟಪಡಿಸಿದೆ.

‘ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪ್ರಶ್ನೆಪತ್ರಿಕೆ ಪರೀಕ್ಷೆಗಾಗಿ ಇಲಾಖೆ ಸಿದ್ಧಪಡಿಸಿದ ಪತ್ರಿಕೆಯಲ್ಲ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಪಿ.ಸಿ.ಜಾಫರ್‌ ಸ್ಪಷ್ಟಪಡಿಸಿದ್ದಾರೆ. ಮೂಲ ಪ್ರಶ್ನೆಪತ್ರಿಕೆಯೊಂದಿಗೆ ತಾಳೆಹಾಕಿದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT