ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಸಮ್ಮೇಳನ ಮುಂದೂಡಲು ಸಲಹೆ: ಅ.23ರಂದು ನಿರ್ಧಾರ

Last Updated 19 ಅಕ್ಟೋಬರ್ 2018, 19:02 IST
ಅಕ್ಷರ ಗಾತ್ರ

ಧಾರವಾಡ: ಡಿಸೆಂಬರ್‌ನಲ್ಲಿ ಇಲ್ಲಿ ನಡೆಯಬೇಕಿದ್ದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಬೇಕೆ, ಬೇಡವೇ ಎಂದು ತೀರ್ಮಾನಿಸಲು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್‌ ಅವರು ಅ.23ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ.

‘ಡಿ.7ರಿಂದ 9ರವರೆಗೆ ಸಮ್ಮೇಳನ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಸಮ್ಮೇಳನ ನಡೆಸಲು ಸಮಯಾವಕಾಶ ಕಡಿಮೆ ಇದೆ. ಹೀಗಾಗಿ ಮುಂದೂಡಬೇಕು ಎಂದು ಇಲ್ಲಿ ನಡೆದಿದ್ದ ಪೂರ್ವಭಾವಿ ಸಭೆಯಲ್ಲಿ ಬಹುತೇಕರು ಸಲಹೆ ನೀಡಿದ್ದರು. ಇದನ್ನು ಅಧ್ಯಕ್ಷರ ಗಮನಕ್ಕೆ ತರಲಾಗಿತ್ತು. ಹೀಗಾಗಿ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಸಭೆ ಕರೆದಿದ್ದಾರೆ’ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಅವರು ಶುಕ್ರವಾರ ’ಪ್ರಜಾವಾಣಿ’ಗೆ ತಿಳಿಸಿದರು.

‘ಜನವರಿ ಮೊದಲ ವಾರ ಸಮ್ಮೇಳನ ಆಯೋಜಿಸುವಂತೆ ಸಲಹೆಗಳು ಬಂದಿವೆ. ಒಟ್ಟು 16 ಸಮಿತಿಗಳನ್ನು ರಚನೆ ಮಾಡಬೇಕಿದೆ. ವಿಚಾರಗೋಷ್ಠಿ ಸಮಿತಿ ಮಾತ್ರ ರಚನೆಯಾಗಿದೆ. ಈ ಸಮಿತಿಯಲ್ಲಿ ಡಾ. ಸಿ.ಎನ್‌.ರಾಮಚಂದ್ರನ್‌, ಡಾ. ರಾಜೇಶ್ವರಿ ಮಹೇಶ್ವರಯ್ಯ, ಡಾ. ಶಾರದಾ ಇದ್ದಾರೆ. ಉಳಿದ ಸಮಿತಿಗಳು ಇನ್ನೂ ರಚನೆಯಾಗಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT