ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ ಕನ್ನಡ ಸಾಹಿತ್ಯ ಸಮ್ಮೇಳನದ ವಸತಿ ಮಾಹಿತಿಗೆ ಸಹಾಯವಾಣಿ

Last Updated 3 ಫೆಬ್ರುವರಿ 2020, 13:08 IST
ಅಕ್ಷರ ಗಾತ್ರ

ಕಲಬುರ್ಗಿ: ಫೆಬ್ರುವರಿ 5ರಿಂದ 7ರವರೆಗೆ ಇಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳ ಅನುಕೂಲಕ್ಕಾಗಿ ಸಹಾಯವಾಣಿ ಆರಂಭಿಸಲಾಗಿದೆ.

ವಸತಿ ಮತ್ತು ಸಾರಿಗೆ ವ್ಯವಸ್ಥೆ ಮತ್ತಿತರ ವಿವರಗಳನ್ನು ನೀಡುವುದಕ್ಕಾಗಿ ಸಹಾಯವಾಣಿ ಫೆ. 4ರ ಮಧ್ಯಾಹ್ನ 2ರಿಂದ ಫೆ. 7ರ ಮಧ್ಯರಾತ್ರಿಯವರೆಗೆ ಕಾರ್ಯನಿರ್ವಹಿಸಲಿದೆ ಎಂದು ವಸತಿ ಹಾಗೂ ಸಾರಿಗೆ ಸಮಿತಿ ಅಧ್ಯಕ್ಷ, ಶಾಸಕರ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಪ್ರತಿನಿಧಿಗಳು ಸಂಪರ್ಕಿಸಬೇಕಾದ ಮೊ. ಸಂಖ್ಯೆ:72595 42950, 76195 42950, 90085 42950, 81055 42950.

30 ಜಿಲ್ಲೆಗಳ ಕಸಾಪ ಅಧ್ಯಕ್ಷರಿಗೂ ‘ರಥ ಭಾಗ್ಯ’: ಸಮ್ಮೇಳನದ ಮೊದಲ ದಿನ ನಡೆಯುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ 30 ಜಿಲ್ಲೆಗಳ ಅಧ್ಯಕ್ಷರಿಗೂ ರಥವೇರುವ ಭಾಗ್ಯ ಒದಗಿ ಬರಲಿದೆ.

‘ವಿವಿಧ ಜಿಲ್ಲೆಗಳನ್ನು ಪ್ರತಿನಿಧಿಸುವ ಕಸಾಪ ಜಿಲ್ಲಾ ಘಟಕಗಳ ಅಧ್ಯಕ್ಷರಿಗಾಗಿ 10 ರಥಗಳನ್ನು ಸಿದ್ಧಗೊಳಿಸಲಾಗುತ್ತಿದೆ. ಪ್ರತಿ ರಥದಲ್ಲಿ ಮೂವರು ಅಧ್ಯಕ್ಷರು ಕುಳಿತುಕೊಳ್ಳಲಿದ್ದಾರೆ. ಸಮ್ಮೇಳನಾಧ್ಯಕ್ಷ ಎಚ್‌.ಎಸ್‌.ವೆಂಕಟೇಶಮೂರ್ತಿ ಅವರು ಇರುವ ರಥದ ಹಿಂದೆಯೇ ಈ 10 ರಥಗಳು ಸಂಚರಿಸಲಿವೆ’ ಎಂದು ಮೆರವಣಿಗೆ ಸಮಿತಿ ಅಧ್ಯಕ್ಷ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT