ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪಾಲ ಬೆಟ್ಟದ ವಿವಾದ ಹಳೆಯದು: ಬಸವರಾಜ ಬೊಮ್ಮಾಯಿ

Last Updated 13 ಜನವರಿ 2020, 10:44 IST
ಅಕ್ಷರ ಗಾತ್ರ

ಬೆಂಗಳೂರು: ಕನಕಪುರದ ಕಪಾಲ ಬೆಟ್ಟದ ವಿವಾದ ಇವತ್ತಿನದಲ್ಲ. ಬಹಳ ಹಿಂದಿನಿಂದಲೇ ಮುನೇಶ್ವರ ಬೆಟ್ಟ ಮತ್ತು ಏಸು ಬೆಟ್ಟ ಎಂಬ ವಿವಾದ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿವಾದದ ಸಂಗತಿ ಡಿ.ಕೆ.ಶಿವಕುಮಾರ್‌ ಅವರಿಗೂ ಗೊತ್ತೇ ಇದೆ. ವಿವಾದ ಹುಟ್ಟು ಹಾಕುವ ಕೆಲಸ ಹಿಂದಿನಿಂದಲೂ ನಡೆದುಕೊಂಡೇ ಬಂದಿದೆ ಎಂದು ಅವರು ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಕಪಾಲಬೆಟ್ಟದ ಭೂ ಸಮಸ್ಯೆಯ ಬಗ್ಗೆ ಕಂದಾಯ ಸಚಿವ ಆರ್‌.ಅಶೋಕ ಅವರು ಪರಿಶೀಲನೆ ನಡೆಸುತ್ತಾರೆ. ಅಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಆದ್ಯತೆ. ಯಾವುದೇ ರೀತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಆಗದಂತೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ತಿಳಿಸಿದರು.

ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಈ ವಿವಾದ ಎದ್ದಿಲ್ಲ. ಯಾವುದೇ ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಅದೇ ರೀತಿ ಈಗ ವಿವಾದ ಎದ್ದಿದೆ. ಪ್ರತಿಭಟನೆ ನಡೆಸುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಆ ಹಕ್ಕನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಬಳ್ಳಾರಿಯಲ್ಲಿ ಶಾಸಕ ಜಮೀರ್‌ ಅಹಮದ್ ಖಾನ್‌ ಅವರ ಬಂಧನ ಕುರಿತು ಪ್ರತಿಕ್ರಿಯಿಸಿದ ಅವರು, ಅಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT