ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ ನಿರಾಕರಣೆ ಚಳವಳಿ ಎಚ್ಚರಿಕೆ

Last Updated 17 ಜನವರಿ 2019, 17:22 IST
ಅಕ್ಷರ ಗಾತ್ರ

ಬೆಂಗಳೂರು: ಕಬ್ಬಿನ ಕಳೆದ ವರ್ಷದ ಬಾಕಿ ಹಾಗೂ ಈ ವರ್ಷದ ಹಣ ಕೊಡಿಸದಿದ್ದರೆ ಇದೇ 30ರಿಂದ ರಾಜ್ಯದಾದ್ಯಂತ ಕರ ನಿರಾಕರಣೆ ಚಳವಳಿ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್‌ ಎಚ್ಚರಿಸಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಾಕಿ ಪಾವತಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಹಲವು ಸಲ ಮನವಿ ಸಲ್ಲಿಸಲಾಗಿತ್ತು. ಆರು ತಿಂಗಳಿಗೊಮ್ಮೆ ಸಕ್ಕರೆ ಸಚಿವರು ಹಾಗೂ ಕಬ್ಬು ಆಯುಕ್ತರು ಬದಲಾಗುತ್ತಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ’ ಎಂದರು.

‘ರಾಜ್ಯದ 156 ತಾಲ್ಲೂಕುಗಳಲ್ಲಿ ಬರಗಾಲ ಇದೆ. ಭತ್ತ, ರಾಗಿ, ಮೆಕ್ಕೆಜೋಳ ಬೆಳೆದ ರೈತರು ಖರೀದಿ ಕೇಂದ್ರ ಸ್ಥಾಪನೆಗೆ ಹಲವು ದಿನಗಳಿಂದ ಒತ್ತಾಯ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರ ಕುರ್ಚಿ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದೆ. ಬಿಜೆಪಿ ಕುರ್ಚಿ ಕಿತ್ತುಕೊಳ್ಳಲು ಪ್ರಯತ್ನಿಸುತ್ತಿದೆ. ಎಲ್ಲ ಪಕ್ಷಗಳು ರೈತರನ್ನು ನಿರ್ಲಕ್ಷ್ಯ ಮಾಡುತ್ತಿವೆ’ ಎಂದರು.

‘ಡಾ.ಎಂ.ಎಸ್‌.ಸ್ವಾಮಿನಾಥನ್‌ ವರದಿ ಜಾರಿ, ರೈತರಿಗೆ ಕನಿಷ್ಠ ಆಹಾರ ಭದ್ರತೆ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್‌ 12ರಂದು ಬೆಂಗಳೂರಿನಲ್ಲಿ ಸಮಾವೇಶ ನಡೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT